ನವದೆಹಲಿ:ರಾಜ್ಯದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಮತ್ತು ನಾಯಕರು ಗೊಂದಲದಲ್ಲಿದ್ದಾರೆ. ಕೆಪಿಸಿಸಿ ಆಧ್ಯಕ್ಷ ಸ್ಥಾನಕ್ಕೆ ನೇಮಕಕ್ಕೆ ಸೋನಿಯಾ ಗಾಂಧಿ ಅವರನ್ನು ಒತ್ತಾಯಿಸಿದ್ದೇನೆ ಎಂದು ದಿನೇಶ್ ಗುಂಡೂರಾವ್​ ತಿಳಿಸಿದ್ದಾರೆ.
ಕಾಂಗ್ರೆಸ್​ ಮುಖ್ಯಸ್ಥೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಭೇಟಿ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ರಾಜೀನಾಮೆ ಕೊಟ್ಟು ಎರಡು ತಿಂಗಳಾಗಿದೆ. ಇನ್ನು ತಡವಾದರೆ ತಪ್ಪು ಸಂದೇಶ ಹೋಗುತ್ತದೆ ಎಂದು ಮನವರಿಕೆ ಮಾಡಿದ್ದೇನೆ ಎಂದರು.
ನನ್ನ ಮಾತುಗಳನ್ನು ಕೇಳಿದ ಸೋನಿಯಾ ಗಾಂಧಿ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಆದಷ್ಟೂ ಬೇಗನೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಕಳೆದ ಡಿಸೆಂಬರ್​ನಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋತಿತ್ತು. ಪಕ್ಷ ಕೇವಲ ಒಂದು ಸ್ಥಾನ ಗಳಿಸಿದ ಬೆನ್ನಲ್ಲೇ ಸೋಲಿನ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
