ಮಡಿಕೇರಿ:ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಇವಿಎಂ ಯಂತ್ರವನ್ನು ಹ್ಯಾಕ್ ಮಾಡಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯಿಸಲು ಕೆಪಿಸಿಸಿ ಮುಖಂಡರು ಚರ್ಚಿಸುತ್ತಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕ ಟಿ.ಎಂ.ಶಾಹೀದ್ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ಹಾಗೂ ಆರ್‌ಆರ್ ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಇವಿಎಂ ಯಂತ್ರ ಹ್ಯಾಕ್ ಮಾಡಿರುವ ಸಂಶಯ ವ್ಯಕ್ತವಾಗಿದೆ. ಬಿಜೆಪಿ ಅಧಿಕಾರ ಹಾಗೂ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಾಧ್ಯತೆ ಇದೆ. ಜತೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಹಣದ ಹೊಳೆ ಹರಿಸಲಾಗಿದೆ. ಈ ಹಿನ್ನೆಲೆ ತನಿಖೆಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಖಲೀಲ್ ಭಾಷಾ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸದಸ್ಯೆ ಗೀತಾ ಧರ್ಮಪ್ಪ, ಪ್ರಮುಖರಾದ ಸುಜುತಿಮ್ಮಯ್ಯ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + five =
Remember me
