ಬೆಂಗಳೂರು:ಅಧಿಕಾರಿಗಳೇ.. ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಿ. ಇಲ್ಲದೆ ಹೋದರೆ ಮುಂದೆ ನಿಮ್ಮ ಭವಿಷ್ಯಕ್ಕೆ ಮುಳುವಾಗುತ್ತೆ. ನಿಮ್ಮನ್ನು ಎತ್ತಂಗಡಿ, ಸಸ್ಪೆಂಡ್ ಮಾಡಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಗುಡುಗಿದ್ದಾರೆ.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಮತ್ತಿಕೆರೆಯಲ್ಲಿ ಪೂರ್ವಭಾವಿ ಪ್ರಚಾರ ಸಭೆ ನಡೆಸಿ ಮಾತನಾಡಿ, ನಮ್ಮ ಕಾರ್ಯಕರ್ತರ ಮೇಲೆ ಎಫ್​ಐಆರ್ ಆಗಿರುವ ಮಾಹಿತಿ ಕೊಡಿ. ತಕ್ಷಣವೇ ಎಫ್​ಐಆರ್ ಮಾಡಿರುವ ಅಧಿಕಾರಿಯನ್ನು ಸಸ್ಪೆಂಡ್ ಮಾಡಿಸುತ್ತೇನೆ. ನನಗೆ ಕನಕಪುರ ವಿಧಾನಸಭೆ ಕ್ಷೇತ್ರ ಎಷ್ಟು ಮುಖ್ಯವೋ, ಆರ್.ಆರ್. ನಗರವೂ ಅಷ್ಟೇ ಮುಖ್ಯ ಎಂದರು.
ಪಕ್ಷದ ಕಾರ್ಯಕರ್ತರಿಗೆ ಆರ್.ಆರ್. ನಗರದಲ್ಲಿ ಸಾಕಷ್ಟು ತೊಂದರೆ ಆಗುತ್ತಿದೆ. ಇಂದಿಗೆ ಅವೆಲ್ಲವೂ ಕೊನೆಗೊಳ್ಳಲಿದೆ. ಇನ್ನು ಮುಂದೆ ಇಲ್ಲಿನ ಸಮಸ್ಯೆಗಳನ್ನು ನೋಡಿಕೊಂಡು ಸುಮ್ಮನೆ ಕೂರುವುದಿಲ್ಲ. ಕಾರ್ಯಕರ್ತರ ವಿರುದ್ಧ ಹಾಕಿರುವ ಮೊಕದ್ದಮೆಗಳಲ್ಲಿ ವಾದ ಮಂಡಿಸಲು ವಕೀಲರನ್ನು ನೇಮಿಸುತ್ತೇನೆ. ಇನ್ನು ಹತ್ತು ದಿನ ಇಲ್ಲೇ ಇರುತ್ತೇನೆ ಎಂದು ಹೇಳಿದರು.
ಈ ಉಪಚುನಾವಣೆಯಿಂದ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯೋದಿಲ್ಲ. ಈ ಚುನಾವಣೆಯಿಂದ ಮೋದಿಗೇನೂ ಸಮಸ್ಯೆಯೂ ಇಲ್ಲ. ಆದರೆ, ಇಲ್ಲಿನ ಜನರು ಹಾಗೂ ಕಾರ್ಯಕರ್ತರು ಅನುಭವಿಸುತ್ತಿರುವ ಕಿರುಕುಳಕ್ಕೆ ಪರಿಹಾರ ನೀಡಬೇಕಿದೆ ಎಂದು ಶಿವಕುಮಾರ್ ಹೇಳಿದರು.
ಯುವ ಕಾಂಗ್ರೆಸ್​ಗೆ ಜವಾಬ್ದಾರಿ
ರೇಸ್​ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಯುವ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ ಡಿಕೆಶಿ, ರಾಜರಾಜೇಶ್ವರಿ ನಗರದಲ್ಲಿ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು. ಮಾಜಿ ಸಚಿವ ಯು.ಟಿ. ಖಾದರ್, ಪಕ್ಷದ ಅಭ್ಯರ್ಥಿ ಕುಸುಮಾ, ಬಸವನಗೌಡ ಬಾರ್ದಲಿ, ನಲಪಾಡ್, ಕೆಂಪರಾಜ್ ಮತ್ತಿತರರು ಉಪಸ್ಥಿತರಿದ್ದರು. ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿನ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
