ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬರೋಬ್ಬರಿ 40 ವರ್ಷಗಳ ಬಳಿಕ ಭಾನುವಾರ ಕಾವೇರಿ ನದಿಯಲ್ಲಿ ಈಜಾಡಿ ಕೆಲ ಸಮಯ ಕಳೆದಿದ್ದಾರೆ.
ಭಾನುವಾರ ‪ಸೂರ್ಯ ಗ್ರಹಣ ಇತ್ತು. ಅಂದು ಸಂಜೆ ಕಾವೇರಿ ನದಿಯಲ್ಲಿ ಡಿಕೆಶಿ ಈಜಾಡುತ್ತ ಕಾಲ ಕಳೆದಿದ್ದಾರೆ. ಗ್ರಹಣ ಮುಗಿದ ನಂತರ ಕುಟುಂಬಸ್ಥರೊಂದಿಗೆ ಅಲ್ಲಿನ ಈಶ್ವರ ದೇವಸ್ಥಾನದಲ್ಲಿ ಪೂಜೆಯನ್ನೂ ಸಲ್ಲಿಸಿದ್ದಾರೆ. ನದಿಯಲ್ಲಿ ಈಜುತ್ತಿರುವ ಮತ್ತು ಕುಟುಂಬಸ್ಥರೊಂದಿಗೆ ಕ್ಲಿಕ್ಕಿಸಿದ ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಶೇರ್ ಮಾಡಿಕೊಂಡಿದ್ದು, ಈ ವೇಳೆ ಶಾಲಾ- ಕಾಲೇಜು ದಿನ ಮತ್ತು ತಂದೆಯೊಂದಿಗೆ ಕಾಲ ಕಳೆದಿದ್ದ ಕ್ಷಣಗಳನ್ನೂ ಮೆಲುಕು ಹಾಕಿದ್ದಾರೆ. ಅವರೇ ಬರೆದುಕೊಂಡ ನೆನಪುಗಳು ಇಲ್ಲಿದೆ ನೋಡಿ.
ಇದನ್ನೂ ಓದಿರಿರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!
“40 ವರ್ಷಗಳ ನಂತರ ಭಾನುವಾರ ಸಂಜೆ 4:30ಕ್ಕೆ ನಮ್ಮ ಹಳ್ಳಿಯ ಬಳಿ ಕಾವೇರಿ ನದಿಯಲ್ಲಿ ಈಜಾಡಿ ನಾನು ಕೆಲ ಸಮಯ ಕಳೆದದ್ದು ನಿಜಕ್ಕೂ ಸಂತಸ ನೀಡಿದೆ. ನನ್ನ ಶಾಲಾ ಹಾಗೂ ಕಾಲೇಜು ದಿನಗಳಲ್ಲಿ ನಾನು ಮತ್ತು ನನ್ನ ತಂದೆಯೊಂದಿಗೆ ಇದೇ ಸ್ಥಳದಲ್ಲಿ ಮೀನು ಹಿಡಿಯುತ್ತಿದ್ದೆ. ನದಿಯಲ್ಲಿ ಈಜಾಡುತ್ತಿದ್ದ ಕ್ಷಣಗಳು ಮತ್ತೊಮ್ಮೆ ಕಣ್ಣ ಮುಂದೆ ಹಾದುಹೋದವು” ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.
https://www.facebook.com/DKShivakumar.official/posts/2751345508418984
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fifteen =
Remember me
