ಬೆಂಗಳೂರು:ದೇಶದಲ್ಲಿ ಕರೊನಾ ಎರಡನೇ ಅಲೆ ವ್ಯಾಪಿಸುತ್ತಿರುವ ಈ ಸಂಕಷ್ಟದ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಜನತೆಗೆ ದೈರ್ಯ ತುಂಬಿದ್ದಾರೆ.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರ ಭಾಷಣವನ್ನು ಟೀಕಿಸಿದ್ದಾರೆ. ಪ್ರಸ್ತುತ ಬಿಕ್ಕಟ್ಟಿನ ಈ ಸಂದರ್ಭಕ್ಕೆ ಪ್ರಧಾನಿಯವರು ಯಾವುದೇ ಗಣನೀಯ ಪರಿಹಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.
ಆಕ್ಸಿಜನ್ ಕೊರತೆ, ಐಸಿಯು ಹಾಗೂ ಔಷಧಿ ಕೊರತೆ ಬಗ್ಗೆ ಪ್ರಧಾನಿಯವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸದಿರುವುದು ಆಶ್ಚರ್ಯ ಮೂಡಿಸಿದೆ. ದೇಶಕ್ಕೆ ಎದುರಾಗಿರುವ ಆಪತ್ತನ್ನು ಈ ಮೂಲಕ ಪ್ರಧಾನಿಯವರು ನಿರಾಕರಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
There is nothing substantial in the PM's address. No solutions offered regarding the shortages of Oxygen, ICU Beds & life saving drugs.
Is the PM denying or unaware of the emergency situation the nation is facing?
It's like there is no govt & people have to fend for themselves.
— DK Shivakumar (@DKShivakumar)April 20, 2021

ಪ್ರಧಾನಿ ಅವರು ತಮ್ಮ ಭಾಷಣದಲ್ಲಿ ಮತ್ತೊಮ್ಮೆ ಲಾಕ್​ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಕೋವಿಡ್ ತಡೆ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಮರೆಯದಿರೋಣ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ದೇಶ ಮತ್ತೊಂದು ದೊಡ್ಡ ಸಂಕಷ್ಟಕ್ಕೆ ತೆರೆದುಕೊಂಡಿದೆ. ಹಲವಾರು ಜನ ಜೀವ ಕಳೆದುಕೊಂಡಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ.
ಮತ್ತೊಮ್ಮೆ ಲಾಕ್​ಡೌನ್ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 6 =
Remember me
