ನವದೆಹಲಿ:ಕರ್ನಾಟಕ ವಿಧಾನಸಭೆ ಚುನಾವನೆ ನಿಮಿತ್ತ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್​ ತನ್ನ ಅಬ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಇನ್ನು ಐದನೇ ಪಟ್ಟಿಯಲ್ಲಿ ಕಾಂಗ್ರೆಸ್​ ಅಚ್ಚರಿಯ ಅಭ್ಯರ್ಥಿಗಳನ್ನು ಘೋಷಿಸಿದ್ದು ನಿರೀಕ್ಷೆಯಂತೆ ಪುಲಕೇಶಿನಗರದ ಟಿಕೆಟ್​ ಶಾಸಕ ಅಖಂಡ ಶ್ರೀನಿವಾಸ್​ ಅವರ ಕೈ ತಪ್ಪಿದೆ.
ಇನ್ನು ಮಂಗಳವಾರ ಬಿಡುಗಡೆ ಮಾಡಿದ್ದ ಕಾಂಗ್ರೆಸ್​ನ ನಾಲ್ಕನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಎದುರು ಯುಸೂಫ್ ಸವಣೂರ ಅವರನ್ನು ಕಣಕ್ಕಿಳಿಸುವ ಮೂಲಕ ಅಚ್ಚರಿ ಮೂಡಿಸಲಾಗಿತ್ತು.
ಇದನ್ನೂ ಓದಿ:ಮಾತೃ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಿ; ವಿವಿಗಳಿಗೆ UGC ಸೂಚನೆ
ಇನ್ನು ಬುಧವಾರ ಬಿಡುಗಡೆಯಾಗಿರುವ ಐದನೇ ಪಟ್ಟಿಯಲ್ಲಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಎದುರಿನ ಅಭ್ಯರ್ಥಿಯನ್ನು ಕಾಂಗ್ರೆಸ್​ ಬದಲಿಸಿದ್ದು ಇದೀಗ ಉದ್ಯಮಿ, ಸವಣೂರಿನ ಯಾಸೀರ್ ಖಾನ್ ಪಠಾಣ್​ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಇನ್ನು 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಗಳಿಸಿದ್ದ ಶಾಸಕ ಅಖಂಡ ಶ್ರೀನಿವಾಸ್​ ಮೂರ್ತಿಗೆ ಈ ಬಾರಿಯ ಟಿಕೆಟ್​ ಕೈ ತಪ್ಪಿದೆ.
ಅಖಂಡ ಶ್ರೀನಿವಾಸ್​ ಮುರ್ತಿ ಬದಲು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಟಿಕೆಟ್​ ಆಕಾಂಕ್ಷಿಯಾಗಿದ್ದ ಎ.ಸಿ. ಶ್ರೀನಿವಾಸ್​ ಅವರಿಗೆ ಪುಲಕೇಶಿನಗರ ಟಿಕೆಟ್​ ಕೊಡಿಸುವಲ್ಲಿ ಕೆ.ಎಚ್​. ಮುನಿಯಪ್ಪ ಯಶಸ್ವಿಯಾಗಿದ್ಧಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
