ಬೆಂಗಳೂರು:ನಗರದ ಹೃದಯ ಭಾಗದಲ್ಲಿರುವ ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಇಂಜಿನಿಯರಿಂಗ್​ ಕಾಲೇಜು(UVCE)ಅನ್ನು ಖಾಸಗೀಕರಣ ಮಾಡಲು ಹೊರಟಿರುವ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಕರ್ನಾಟಕ ಕಾಂಗ್ರೆಸ್​ ಖಂಡಿಸಿದೆ.
ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​ ಘಟಕ ಕನ್ನಡಿಗರ ಹೆಮ್ಮೆಯ ವಿಶ್ವೇಶ್ವರಯ್ಯ ಕಾಲೇಜು ವಿಶ್ವವಿದ್ಯಾಲಯವನ್ನು ಖಾಸಗೀಕರಣ ಮಾಡಲು ಹೊರಟಿರುವ ಬಿಜೆಪಿ ಸರರ್ಕಾರದ ಕ್ರಮ ಖಂಡನೀಯ. ಸರ್ ಎಂ ವಿಶ್ವೇಶ್ವರಯ್ಯನವರು ಕಟ್ಟಿದ ರಾಜ್ಯದ ಮೊದಲ ಎಂಜಿನಿಯರಿಂಗ್ ಕಾಲೇಜು ಇದಾಗಿದ್ದು ರಾಜ್ಯದ ಎಲ್ಲಾ ವರ್ಗದ ಮಕ್ಕಳಿಗೂ ಎಂಜಿನಿಯರಿಂಗ್ ಓದಲು ಇದು ಆಸರೆಯಾಗಿತ್ತು.
ಇದನ್ನೂ ಓದಿ:VIDEO| ರಾಮನವಮಿ ವೇಳೆ ಹಿಂಸಾಚಾರ; ರಾಜ್ಯಪಾಲರಿಂದ ವರದಿ ಕೇಳಿದ ಅಮಿತ್​ ಷಾ
ಈಗ ವಿಶ್ವೇಶ್ವರಯ್ಯ ಕಾಲೇಜು ವಿಶ್ವವಿದ್ಯಾಲಯವನ್ನು ಸ್ವಾಯತ್ತ ಸಂಸ್ಥೆಯಾಗಿ ಮಾಡುವ ಮೂಲಕ ರಾಜ್ಯದಲ್ಲಿ ಉಳಿದಿರುವ ಕೆಲವೇ ಸರ್ಕಾರಿ ಕಾಲೇಜುಗಳನ್ನೂ ಸಹ ಖಾಸಗೀಕರಣ ಮಾಡಿ ಬಡವರ ಮಕ್ಕಳಿಗೆ ಎಂಜಿನಿಯರಿಂಗ್ ಓದು ಲಭ್ಯವಿಲ್ಲದಂತೆ ಮಾಡಲು ಸಿಎಂ ಬಸವರಾಜ್​ ಬೊಮ್ಮಾಯಿ ಹಾಗೂ ಸಚಿವ ಅಶ್ವತ್ಥನಾರಾಯಣ ಹೊರಟ್ಟಿದ್ದಾರೆ. ಇದು ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಯಾಗಿದೆ ಎಂದು ಟ್ವೀಟ್​ ಮಾಡಿ ಕರ್ನಾಟಕ ಕಾಂಗ್ರೆಸ್​ ಕಿಡಿಕಾರಿದೆ.
ಈಗ ವಿಶ್ವೇಶ್ವರಯ್ಯ ಕಾಲೇಜು ವಿಶ್ವವಿದ್ಯಾಲಯವನ್ನು ಸ್ವಾಯತ್ತ ಸಂಸ್ಥೆಯಾಗಿ ಮಾಡುವ ಮೂಲಕ ರಾಜ್ಯದಲ್ಲಿ ಉಳಿದಿರುವ ಕೆಲವೇ ಸರ್ಕಾರಿ ಕಾಲೇಜುಗಳನ್ನೂ ಸಹ ಖಾಸಗೀಕರಣ ಮಾಡಿ ಬಡವರ ಮಕ್ಕಳಿಗೆ ಎಂಜಿನಿಯರಿಂಗ್ ಓದು ಲಭ್ಯವಿಲ್ಲದಂತೆ ಮಾಡಲು ಹೊರಟಿದ್ದಾರೆ@BSBommaiಹಾಗೂ@drashwathcnಇದು ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಯಾಗಿದೆ2/2
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
