ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಾಗಿ ಬರೆದುಕೊಂಡಿದ್ದ ಆರೋಪದಡಿ ಕೆಪಿಸಿಸಿ ಸೋಷಿಯಲ್ ಮೀಡಿಯಾ ಸೆಕ್ರೆಟರಿ ಆನಂದ್ ಪ್ರಸಾದ್​ರನ್ನು ಬಂಧಿಸಲಾಗಿದೆ.
ನಿನ್ನೆ(ಭಾನುವಾರ) ಅಮಿತ್ ಷಾ ಅವರಿಗೆ ಕರೊನಾ ದೃಢಪಟ್ಟ ಬೆನ್ನಲ್ಲೇ ಅವರ ಬಗ್ಗೆ ಆನಂದ್ ಪ್ರಸಾದ್ ತನ್ನ ಟ್ವಿಟರ್​ ಖಾತೆಯಲ್ಲಿ ಆಕ್ಷೇಪಾರ್ಹ ಹೇಳಿಕೆಯನ್ನು ಪೋಸ್ಟ್ ಮಾಡಿದ್ದರು.
ಇದನ್ನೂ ಓದಿರಿಸಿಎಂ ಯಡಿಯೂರಪ್ಪ ನಿವಾಸದಲ್ಲಿ ಕರೊನಾ ಸ್ಫೋಟ, 11 ಮಂದಿಗೆ ಸೋಂಕು ದೃಢ
ಅಮಿತ್​ ಷಾ ಬಗ್ಗೆ ಅವಹೇಳನಾಕಾರಿ ಬರಹ ಹಾಕಿದ್ದ ಹಿನ್ನೆಲೆಯಲ್ಲಿ ನಿನ್ನೆರಾತ್ರಿ ಆನಂದ್ ಪ್ರಸಾದ್​ರನ್ನು ಕೆ.ಆರ್.ಪುರಂನ ಅವರ ನಿವಾಸದಲ್ಲಿ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಸದ್ಯ ಟ್ವಿಟರ್​ನ ಬರಹ ಡಿಲೀಟ್ ಮಾಡಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 505 (1)(b), 505(1) (C),153 ಐಪಿಸಿ ಸೆಕ್ಷನ್ ಅಡಿ ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತಿಥಿ ಕಾರ್ಯ ಮುಗಿದ ನಂತರ ಬಂತು ಶವ, ಕೋವಿಡ್​ ಆಸ್ಪತ್ರೆಯ ಮಹಾ ಯಡವಟ್ಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
