ಬೆಂಗಳೂರು:ಕೆಪಿಎಸ್‌ಸಿ 2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿಯ 428 ಹುದ್ದೆಗಳ ಲಿಖಿತ ಪರೀಕ್ಷೆಯ ಡಿಜಿಟಲ್ ಮೌಲ್ಯಮಾಪನದಲ್ಲಿ ಉತ್ತರ ಪತ್ರಿಕೆಗಳ ಅಂಕಗಳನ್ನು ತಿದ್ದಲಾಗಿದ್ದು, ಅಂತಿಮ ಆಯ್ಕೆಪಟ್ಟಿಯನ್ನು ತಡೆಹಿಡಿಯುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಹೈಕೋರ್ಟ್ ವಾಪಸ್ ಕಳುಹಿಸಿದೆ.
ಅರ್ಜಿಗಳನ್ನು ಮುಂದಿನ 3 ತಿಂಗಳ ಒಳಗೆ ವಿಚಾರಣೆ ನಡೆಸಿ ಸೂಕ್ತ ಆದೇಶ ಹೊರಡಿಸುವಂತೆ ಕೆಎಟಿಗೆ ನಿರ್ದೇಶಿಸಿರುವ ಪೀಠ, ಪ್ರಕರಣ ಸಂಬಂಧ ಈಗಾಗಲೇ ಎಲ್ಲ ಪ್ರತಿವಾದಿಗಳೂ ನ್ಯಾಯಾಲಯಕ್ಕೆ ಹಾಜರಾಗಿದ್ದು, ಅವರಿಗೆ ಕೆಎಟಿ ಹೊಸದಾಗಿ ನೋಟಿಸ್ ಜಾರಿ ಮಾಡುವ ಅಗತ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲರೂ ಜು. 19ರಂದು ಕೆಎಟಿ ಮುಂದೆ ಹಾಜರಾಗಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.
2020ರ ಜ.10ರಂದು ಪ್ರಕಟಿಸಿದ್ದ ಅಂತಿಮ ಆಯ್ಕೆ ಪಟ್ಟಿ ತಡೆ ಹಿಡಿಯುವಂತೆ ಕೋರಿ ಬಿ.ಕೆ. ಸುಧನ್ವ ಬಂಡೋಲ್ಕರ್, ವಿನಯ್ ಕುಮಾರ್ ರಾಮಯ್ಯ ಸೇರಿ 52 ಮಂದಿ ಸಲ್ಲಿಸಿದ್ದ ತಕರಾರು ಅರ್ಜಿಗಳನ್ನು ಇತ್ಯರ್ಥಪಡಿಸಿರುವ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿಗಳನ್ನು ಮರುವಿಚಾರಣೆ ನಡೆಸುವಂತೆ ಕೆಎಟಿಗೆ ನಿರ್ದೇಶಿಸಿದೆ.
2015ನೇ ಸಾಲಿನ ಒಟ್ಟು 428 ಗೆಜಿಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರ ಜನವರಿಯಲ್ಲಿ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆಗಳ ನಂತರ 2020ರ ಜ.10ರಂದು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಈ ಸಾಲಿನ ಲಿಖಿತ ಉತ್ತರ ಪತ್ರಿಕೆಗಳನ್ನು ಡಿಜಿಟಲ್ ಮೌಲ್ಯಮಾಪನಕ್ಕೆ ಟಿಸಿಎಸ್‌ಗೆ ವಹಿಸಿತ್ತು. ಮೌಲ್ಯಮಾಪನ ಮಾಡಿದ ಸಂಸ್ಥೆಯೇ ಫಲಿತಾಂಶ ಪ್ರಕಟಿಸಬೇಕಾಗಿತ್ತು. ಆದರೆ, ಸೆಂಟರ್ ಫಾರ್ ಇ-ಗವರ್ನೆನ್ಸ್‌ನಿಂದ (ಸಿಇಜಿ) ಫಲಿತಾಂಶ ಪ್ರಕಟವಾಗಿತ್ತು. ಇದರಿಂದ, ಮೌಲ್ಯಮಾಪನದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಅವಕಾಶವಂಚಿತ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಪ್ರತಿ ನೀಡುವಂತೆ ಆರ್‌ಟಿಐ ಕಾಯ್ದೆಯಡಿ ಮಾಹಿತಿ ಕೇಳಿದ್ದರೂ, ಕೆಪಿಎಸ್‌ಸಿ ನೀಡಿರಲಿಲ್ಲ. ಈ ಕ್ರಮ ಪ್ರಶ್ನಿಸಿ ಅನೇಕರು ಕೆಎಟಿ ಮೊರೆ ಹೋಗಿದ್ದರು. ಆದರೆ, ಅರ್ಜಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎಂದು ತಿಳಿಸಿ ಕೆಎಟಿ ಅರ್ಜಿ ವಜಾಗೊಳಿಸಿತ್ತು. ಕೆಎಟಿ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿಯಲ್ಲಿ ರಾಜ್ಯ ಸರ್ಕಾರ, ಕೆಪಿಎಸ್‌ಸಿ, ಟಿಸಿಎಸ್ ಹಾಗೂ ಆಯ್ಕೆಯಾಗಿದ್ದ ಅಭ್ಯರ್ಥಿಗಳು ಸೇರಿ 438 ಜನರನ್ನು ಪ್ರತಿವಾದಿಯನ್ನಾಗಿಸಲಾಗಿತ್ತು.
ಇಲ್ಲಿ ‘ಅಳುಮುಂಜಿ’ಯದ್ದೇ ಜೀವಮಾನದ ಸಾಧನೆ; ಕರೊನಾ ಸಂಕಷ್ಟದಲ್ಲೂ ಟ್ವಿಟರ್​ನಲ್ಲಿ ‘ಆನಂದಬಾಷ್ಪ’!

ನಿಮ್ಮ ಧರ್ಮಪತ್ನಿಯ ವಿಚಾರದಲ್ಲೇಕೆ ವಕೀಲರನ್ನು ಕರೆಸಿಕೊಂಡ್ರಿ?; ದರ್ಶನ್​ಗೆ ಇಂದ್ರಜಿತ್ ಪ್ರಶ್ನೆ

ಮಾಜಿ ಸಂಸದ ಮಾದೇಗೌಡ ನಿಧನ; ಮೊನ್ನೆಮೊನ್ನೆಯಷ್ಟೇ ಆಸ್ಪತ್ರೆಯಲ್ಲೇ ಆಚರಣೆಯಾಗಿತ್ತು ಜನ್ಮದಿನ..

ನಟ ದರ್ಶನ್​ ಪ್ರಕರಣದಲ್ಲಿ ಟ್ವಿಸ್ಟ್​: ಕೇಳಿ ಬಂತು ಮತ್ತೊಂದು ಹೆಸರು ನಂದಿತಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + three =
Remember me
