ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಉಳಿಕೆ ವೃಂದದ ಒಟ್ಟು 1,112 (ರಾಜ್ಯ-975, ಹೈ- ಕ 137) ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕ ಸೇವಾ ಆಯೋಗ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಆನ್​ಲೈನ್ ಮೂಲಕವೇ ಅರ್ಜಿ ಭರ್ತಿ ಮಾಡಬೇಕು.
ಫೆ.6ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಮಾ.6 ಅಂತಿಮ ದಿನ. ಪರೀಕ್ಷಾ ಶುಲ್ಕವನ್ನು ಮಾ.7ರ ಅಂತ್ಯದೊಳಗೆ ಪಾವತಿಸಬಹುದು. ಮೇ 10ಕ್ಕೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ. 1ರಿಂದ 10ನೇ ತರಗತಿವರೆಗೂ ಕನ್ನಡ ಭಾಷೆ ಅಧ್ಯಯನ ಮಾಡದ ಅಭ್ಯರ್ಥಿಗಳಿಗೆ ಮೇ 9ರಂದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ (2ಎ, 2ಬಿ, 3ಎ) 50 ರೂ. ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆದರೆ, ಎಲ್ಲ ಅಭ್ಯರ್ಥಿಗಳು ಪ್ರೊಸಸಿಂಗ್ ಶುಲ್ಕ 35 ರೂ.ಗಳನ್ನು ಕಡ್ಡಾಯವಾಗಿ ಪಾವತಿಸಬೇಕು. ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ಇದೆ. ಕೆಪಿಎಸ್​ಸಿ ಸಹಾಯವಾಣಿ 7406086807, 7406086801ಗೆ ಕರೆ ಮಾಡಬಹುದು. ಮಾಹಿತಿಗೆ www.kpsc.kar.nic.in ಸಂಪರ್ಕಿಸಬಹುದು ಎಂದು ಕೆಪಿಎಸ್​ಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eighteen =
Remember me
