ಬೆಂಗಳೂರು:ಅಭ್ಯರ್ಥಿಗಳ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನಡೆಸುವ ಕೆಎಎಸ್ ಮುಖ್ಯ ಪರೀಕ್ಷೆ ದಿನಾಂಕವನ್ನು ಮುಂದೂಡಿದೆ.
ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿಂದೆ ಜನವರಿಯಲ್ಲಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿತ್ತು.
2020ರ ಜನವರಿ 8ರಿಂದ ಐಎಎಸ್ ಮುಖ್ಯ ಪರೀಕ್ಷೆ ನಡೆಸಲು ಕಳೆದ ಆರು ತಿಂಗಳ ಹಿಂದೆ ಯುಪಿಎಸ್‌ಸಿ ದಿನಾಂಕ ನಿಗದಿ ಮಾಡಿತ್ತು. ಈ ಅಂಶ ಗಮನದಲ್ಲಿದ್ದರೂ ಜನವರಿ 4ರಿಂದ ಕೆಎಎಸ್ ಮುಖ್ಯ ಪರೀಕ್ಷೆಗೆ ಕೆಪಿಎಸ್‌ಸಿ ದಿನಾಂಕ ನಿಗದಿ ಮಾಡಿತ್ತು. ಪರಿಣಾಮ ರಾಜ್ಯದಿಂದ ಐಎಎಸ್ ಮತ್ತು ಕೆಎಎಸ್ ಮುಖ್ಯ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ರಾಜ್ಯದ ಸಾವಿರಾರೂ ಅಭ್ಯರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. ಈ ಬಗ್ಗೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಮಧ್ಯೆ ಪ್ರವೇಶ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪರೀಕ್ಷೆ ಮುಂದೂಡುವಂತೆ ಕೆಪಿಎಸ್​ಸಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಯೋಗವು ಪರೀಕ್ಷೆ ಮುಂದೂಡಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರತಿ ಅವಧಿಯಲ್ಲಿ ಕನಿಷ್ಠ ಎರಡು ತಿಂಗಳ ಕಾಲ ಅಂತರದಲ್ಲಿ ಐಎಎಸ್ ಮತ್ತು ಕೆಎಎಸ್ ಮುಖ್ಯ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ, ಪ್ರಸಕ್ತ ಅವಧಿಯಲ್ಲಿ ಮಾತ್ರ ಒಂದೇ ತಿಂಗಳಲ್ಲಿ ನಿಗದಿಯಾಗಿತ್ತು. ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳು(ಮುಖ್ಯಪರೀಕ್ಷೆ) ಫೆ.13ರಿಂದ 16ರವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆhttp://www.kpsc.kar.nic.in/ನೋಡಬಹುದು.
ಹೆಜ್ಜೆ ಇಟ್ಟಲ್ಲಿ ನೀಲಿ ಬೆಳಕು! ಕರ್ನಾಟಕದ ಈ ಸ್ಥಳಕ್ಕೆ ಕಾಲಿಟ್ಟರೆ ಮಿಂಚಲಿದೆ ನೀಲಿ ಬಣ್ಣದ ಹೆಜ್ಜೆ ಗುರುತು

ಕೆಪಿಎಸ್​ಸಿ ಪರೀಕ್ಷೆ ಮುಂದೂಡಲು ಸಿಎಂ ಸೂಚನೆ

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ರದ್ದು! ಇದು ಹೈಕೋರ್ಟ್​ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
