ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್​ಸಿ) 2011ನೇ ಸಾಲಿನ ಗೆಜೆಟೆಡ್ ಪೊ›ಬೆಷನರಿ ಹುದ್ದೆಗಳ ನೇಮಕಾತಿಯಲ್ಲಿ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸುವುದಕ್ಕೆ ಸಂಬಂಧಿಸಿದ ‘ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ, ಅಂತಿಮ ಆದೇಶಕ್ಕೆ ಒಳಪಟ್ಟ ಷರತ್ತಿನೊಂದಿಗೆ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಪತ್ರ ವಿತರಣೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಅನುಮತಿ ನೀಡಿದೆ.
ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಫ್ ಜಮೀಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರಿದ್ದ ಪೀಠ ಅರ್ಜಿಯನ್ನು ವಜಾಗೊಳಿಸಿತು. ಗುರುವಾರ ಕೆಎಟಿಯಲ್ಲೂ ಅರ್ಜಿ ವಿಚಾರಣೆಗೆ ನಿಗದಿಯಾಗಿತ್ತು. ಕಾಯ್ದೆ ಜಾರಿಗೆ ತಡೆ ನೀಡಬೇಕೆಂಬ ಅರ್ಜಿದಾರರ ಮಧ್ಯಂತರ ಮನವಿ ನಿರಾಕರಿಸಿದ ಕೆಎಟಿ, ಕಾಯ್ದೆಯ ಅನುಸಾರ ಸರ್ಕಾರ ನೇಮಕಾತಿ ಆದೇಶ ನೀಡಬಹುದು. ಆದರೆ, ನೇಮಕಾತಿ ಆದೇಶ ಕೆಎಟಿ ಅಂತಿಮ ಆದೇಶಕ್ಕೆ ಒಳಪಟ್ಟಿರಲಿದೆ ಎಂದು ಸ್ಪಷ್ಟಪಡಿಸಿದೆ.
2011ನೇ ಸಾಲಿನ ನೇಮಕಾತಿಯಲ್ಲಿ ಕೆಪಿಎಸ್​ಸಿಯ ಆಯ್ಕೆ ಪಟ್ಟಿಯನ್ನು ಹಿಂದೆ ಹೈಕೋರ್ಟ್ ರದ್ದುಪಡಿಸಿತ್ತು. ಇದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದೆ. ಆ ಬಳಿಕ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕಾತಿ ಆದೇಶ ನೀಡುವ ಸಂಬಂಧ ರಾಜ್ಯ ಸರ್ಕಾರ ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪೊ›ಬೇಷನರ್​ಗಳ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ-2022 ಜಾರಿಗೆ ತಂದಿದೆ. ಹಿಂದಿನ ಆಯ್ಕೆಪಟ್ಟಿಯನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆ ನಂತರ ಕಾಯ್ದೆ ಜಾರಿಗೆ ತರಲಾಗಿದೆ ಎಂದಮಾತ್ರಕ್ಕೆ ಸಂಪೂರ್ಣ ಕಾಯ್ದೆಯೇ ಕಾನೂನುಬಾಹಿರ ಎನ್ನಲಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತು. ಕಾಯ್ದೆಯ ನಿಯಮಗಳು ಅಸಾಂವಿಧಾನಿಕ ಎಂಬುದನ್ನು
ಕೋರ್ಟ್​ಗೆ ಮನವರಿಕೆ ಮಾಡಿಕೊಡಲು ಅರ್ಜಿದಾರರ ಪರ ವಕೀಲರು ವಿಫಲವಾಗಿದ್ದಾರೆ. ಜತೆಗೆ, ಪ್ರಕರಣದಲ್ಲಿ ತೊಂದರೆಗೆ ಒಳಗಾಗಿರುವ ಅಭ್ಯರ್ಥಿಗಳು, ನೇಮಕಾತಿ ಸಿಂಧುಗೊಳಿಸುವುದನ್ನು ಪ್ರಶ್ನಿಸಿ ಈಗಾಗಲೇ ಕೆಎಟಿ ಮೊರೆ ಹೋಗಿದ್ದಾರೆ.
ಹೈಕೋರ್ಟ್ ಹೇಳಿದ್ದೇನು?
ಪ್ರಕರಣವೇನು?
2011ನೇ ಸಾಲಿನ 362 ಅಭ್ಯರ್ಥಿಗಳ ಅಕ್ರಮ ನೇಮಕ ಸಕ್ರಮಗೊಳಿಸಲು ಸರ್ಕಾರ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯ್ದೆಯನ್ನು ಸರ್ಕಾರ ರೂಪಿಸಿ ಜಾರಿಗೆ ತಂದಿದೆ. ಯಾವುದೇ ನ್ಯಾಯಾಲಯ, ನ್ಯಾಯಮಂಡಳಿ ಅಥವಾ ಪ್ರಾಧಿಕಾರದ ಯಾವುದೇ ತೀರ್ಪ, ಡಿಕ್ರಿ ಇಲ್ಲವೇ ಆದೇಶದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಅಭ್ಯರ್ಥಿಗಳ ಯಾವುದೇ ಲೋಪಗಳಿಲ್ಲದ ಕಾರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ 2011ನೇ ಸಾಲಿನ ಅವಕಾಶ ವಂಚಿತ ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಅರ್ಜಿ ಸಂಬಂಧ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದ ಕೆಎಟಿ ವಿಚಾರಣೆ ಮುಂದೂಡಿತ್ತು. ಆದರೆ, ಅರ್ಜಿ ಸಂಬಂಧ ಯಾವುದೇ ಮಧ್ಯಂತರ ಆದೇಶ ನೀಡಿರಲಿಲ್ಲ. ಇದರಿಂದ, ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯನ್ನು ಕಳೆದ ತಿಂಗಳು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಜಿ. ನರೇಂದರ್ ಹಾಗೂ ಎಂ.ಜಿ.ಎಸ್. ಕಮಲ್ ಅವರಿದ್ದ ಪೀಠ, ಕೆಎಟಿಯಲ್ಲಿ ಪ್ರಕರಣ ನಿರ್ಧಾರವಾದ ಬಳಿಕ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು. ಅಲ್ಲಿ ಪ್ರಕರಣವಿನ್ನೂ ಬಾಕಿ ಇದ್ದು, ಈ ಹಂತದಲ್ಲಿ ಅರ್ಜಿದಾರರ ಯಾವುದೇ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಪೀಠ ಅರ್ಜಿಯನ್ನು ವಜಾಗೊಳಿಸಿತು.
ಅರ್ಜಿದಾರರ ವಾದವೇನು?:ಅರ್ಜಿದಾರರ ಪರ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ವಾದ ಮಂಡಿಸಿ, 2011ನೇ ಸಾಲಿನಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕೆಪಿಎಸ್​ಸಿ ಕಾನೂನುಬಾಹಿರ ಚಟುವಟಿಕೆ ನಡೆಸಿರುವುದು ಸಿಐಡಿ ವರದಿಯಿಂದ ಬಹಿರಂಗವಾಗಿದೆ. ಕೆಪಿಎಸ್​ಸಿ ನೇಮಕಾತಿ ಅಧಿ ಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದು, ಅದನ್ನು ಸುಪ್ರೀಂಕೋರ್ಟ್ ಸಹ ಎತ್ತಿ ಹಿಡಿದಿದೆ. ಹೀಗಿದ್ದರೂ, ಕಾನೂನುಬಾಹಿರವಾಗಿ ಸರ್ಕಾರ ಈ ಕಾಯ್ದೆ ರೂಪಿಸಿ ಜಾರಿಗೆ ತಂದಿರುವುದು ಅಸಾಂವಿಧಾನಿಕ, ಅಕ್ರಮವಾಗಿದೆ ಎಂದು ವಿವರಿಸಿದರು.
ಈ ವಾದ ಒಪ್ಪದ ಪೀಠ, ನೇಮಕಾತಿಗೆ ಸಂಬಂಧಿಸಿದಂತೆ ನ್ಯಾಯಾಲಯ ಆದೇಶ ಮಾಡಿರಬಹುದು. ಹಾಗೆಂದ ಮಾತ್ರಕ್ಕೆ ಸಂಪೂರ್ಣ ಕಾಯ್ದೆಯೇ ಸರಿ ಇಲ್ಲ ಎಂದು ಹೇಗೆ ಹೇಳುತ್ತೀರಿ, ಕಾಯ್ದೆ ರೂಪಿಸಲು ಕಾರಣಗಳು ಏನಾದರೂ ಇರಬಹುದು. ಒಮ್ಮೆ ಕಾನೂನು ಜಾರಿಗೊಳಿಸಿದ ನಂತರ ಅದು ಹೇಗೆ ಅಕ್ರಮ ಎಂದು ತೋರಿಸಬೇಕು. ಕಾಯ್ದೆಯಲ್ಲಿನ ಯಾವುದೇ ನಿರ್ದಿಷ್ಟ ನಿಯಮವನ್ನು ನೀವು ಪ್ರಶ್ನಿಸಿಲ್ಲ. ಬದಲಿಗೆ ಇಡೀ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಪಿಐಎಲ್ ಸಲ್ಲಿಸಿದ್ದೀರಿ. ಆದ್ದರಿಂದ, ಕಾಯ್ದೆ ಹೇಗೆ ಅಸಾಂವಿಧಾನಿಕ ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡ ಬೇಕಾಗುತ್ತದೆ ಎಂದು ತಿಳಿಸಿದ ಪೀಠ ಅರ್ಜಿ ಪುರಸ್ಕರಿಸಲು ನಿರಾಕರಿಸಿತು.
ಕೆಎಟಿಗೆ ತಿಳಿಸಿದ ಎಎಜೆ:ಗುರುವಾರ ಕೆಎಟಿ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಹಾಜರಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಪಿಐಎಲ್ ಅನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿರುವ ವಿಚಾರವನ್ನು ಕೆಎಟಿ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ಪೀಠ, ಕಾಯ್ದೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿಗೆ ಕಾಯ್ದೆಗೆ ತಡೆ ನೀಡಲು ಆಗಲ್ಲ ಎಂದಿದೆ.

ಗರಿಗೆದರಿದ ಎಂಎಲ್‌ಸಿ ಚುನಾವಣೆ; ಮೂರು ಜಿಲ್ಲೆಗಳಲ್ಲಿ ರಂಗೇರಿದ ರಾಜಕೀಯ ಕಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 5 =
Remember me
