ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಆಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ರಚಿಸಲಾಗಿದ್ದ ಪಿ.ಸಿ.ಹೋಟಾ ಸಮಿತಿಯ ಎರಡು ಪ್ರಮುಖ ಶಿಫಾರಸುಗಳ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.
ಗೆಜೆಟೆಡ್ ಪ್ರೊಬೆಷನರಿ ಹುದ್ದೆ ಸಂದರ್ಶನಕ್ಕೆ ಇದ್ದ 1:20 ಅನುಪಾತವನ್ನು 1:15ಕ್ಕೆ ಇಳಿಸುವುದಕ್ಕೆ ಮತ್ತು ಸಾಂವಿಧಾನಿಕ ಹುದ್ದೆಯಾಗಿರುವ ಕೆಪಿಎಸ್​ಸಿ ಅಧ್ಯಕ್ಷರ ಸ್ಥಾನಕ್ಕೆ ಮುಖ್ಯ ಮಾಹಿತಿ ಆಯುಕ್ತರ ಸ್ಥಾನಮಾನ ನೀಡಲು ಸಂಪುಟ ಒಪ್ಪಿದೆ. ಆ ಮೂಲಕ ಅಧ್ಯಕ್ಷರ ಹುದ್ದೆಯನ್ನು ರಾಜ್ಯದ ಶಿಷ್ಟಾಚಾರದಲ್ಲಿ 17ನೇ ಸ್ಥಾನಕ್ಕೆ ತರಲಾಗಿದೆ.
‘ಕೆಪಿಎಸ್​ಸಿ ಸದಸ್ಯರ ಆಯ್ಕೆಗೆ ಸಂಬಂಧಿಸಿದಂತೆ ಶೋಧನಾ ಸಮಿತಿ ನೇಮಕ ಮಾಡುವ ಶಿಫಾರಸನ್ನು ಸಂಪುಟ ಸಭೆ ಒಪ್ಪಿಲ್ಲ. ಈ ಅಧಿಕಾರವನ್ನು ಸರ್ಕಾರವೇ ಇಟ್ಟುಕೊಳ್ಳಲು ನಿರ್ಧರಿಸಿದೆ’ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಶೋಧನಾ ಸಮಿತಿಗೆ ಸಂಬಂಧಿಸಿದ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಅದು ಸರ್ಕಾರದ ಅಧಿಕಾರವಾಗಿರುತ್ತದೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − 5 =
Remember me
