| ಮರಿದೇವ ಹೂಗಾರಹುಬ್ಬಳ್ಳಿವಿವಿಧ ಶಾಲೆಗಳ ಶಿಕ್ಷಕರ ಹುದ್ದೆಗಳ ಭರ್ತಿಗೆ ಮೂರು ವರ್ಷಗಳ ಹಿಂದೆ ಕೆಪಿಎಸ್​ಸಿ ಮೂಲಕ ಪರೀಕ್ಷೆ ನಡೆಸಿದ್ದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್) ಈವರೆಗೂ ನೇಮಕಾತಿ ಅಂತಿಮ ಪ್ರಕ್ರಿಯೆ ಪೂರ್ಣಗೊಳಿಸದೆ, ಅಭ್ಯರ್ಥಿಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ.
ನೌಕರಿ ಕೈಗೆ ಸಿಕ್ಕಿಯೇ ಬಿಟ್ಟಿತು ಎಂದು ಆಸೆ ಇಟ್ಟುಕೊಂಡಿದ್ದ ಅಭ್ಯರ್ಥಿಗಳು ಇದರಿಂದ ಕಂಗಾಲಾಗಿದ್ದು, ‘ವಿಜಯವಾಣಿ ಸಹಾಯವಾಣಿ’ ಮುಂದೆ ಅಳಲು ತೋಡಿಕೊಂಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಕ್ರೈಸ್ 2017ರಲ್ಲಿ ಕೆಪಿಎಸ್​ಸಿ ಮೂಲಕ ನೇಮಕದ ಅಧಿಸೂಚನೆ ಹೊರಡಿಸಿತ್ತು. ಖಾಲಿ ಇರುವ 3,326 ವಿವಿಧ ಶಿಕ್ಷಕ ವೃಂದದ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿತ್ತು. ಇದರಲ್ಲಿ ಹೈ-ಕ ಮತ್ತು ರಾಜ್ಯ ವೃಂದ ನೇಮಕಾತಿ ಸೇರಿದೆ. 2019ರ ನವೆಂಬರ್​ನಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಿಂಧುತ್ವ ಪ್ರಮಾಣ ಪತ್ರ, ಮೂಲದಾಖಲಾತಿ ಪರಿಶೀಲನೆ, ಪೊಲೀಸ್ ಪ್ರಮಾಣೀಕರಣ ಇತರೆ ಪ್ರಕ್ರಿಯೆಗಳು ಪೂರ್ಣಗೊಂಡಿವೆ.
ನಿಲಯ ಪಾಲಕರು, ವಿಜ್ಞಾನ, ಆಂಗ್ಲ ಭಾಷೆ ಮತ್ತು ಶುಶ್ರೂಷಾಧಿಕಾರಿ ಹುದ್ದೆಗಳಿಗೆ ಕಳೆದ ಜೂ. 23ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ನಿಗದಿಯಾಗಿತ್ತು. ತಾಂತ್ರಿಕ ಕಾರಣದ ನೆಪವೊಡ್ಡಿ ಅನಿರ್ದಿಷ್ಟಾವಧಿಗೆ ಮುಂದೂಡಿರುವುದು ಅಭ್ಯರ್ಥಿಗಳ ಆಸೆಗೆ ತಣ್ಣೀರೆರಚಿದೆ. ಕನ್ನಡ ಭಾಷೆ, ಗಣಿತ, ಕಂಪ್ಯೂಟರ್ ಶಿಕ್ಷಕರನ್ನು 7 ತಿಂಗಳ ಹಿಂದೆ ನೇಮಕ ಮಾಡಿ ಕೊಳ್ಳಲಾಗಿದೆ. ಆದರೆ ತಮಗೆ ಮಾತ್ರ ಕರೊನಾ ಹಾಗೂ ಆರ್ಥಿಕ ಇಲಾಖೆಯ ಅನುಮತಿ ನೆಪವೊಡ್ಡಿ ನೇಮಕಾತಿ ಆದೇಶ ನೀಡುತ್ತಿಲ್ಲ ಎಂಬುದು ನೊಂದ ಅಭ್ಯರ್ಥಿಗಳ ಅಳಲು.
ಕೇಂದ್ರ ಸರ್ಕಾರದ ಸೂಚನೆಯಂತೆ ಶಾಲೆಗಳು ಆರಂಭವಾಗಲಿವೆ. ತರಬೇತಿ ನೀಡಿ ಶಿಕ್ಷಕರ ಭರ್ತಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಇದನ್ನು ಆರ್ಥಿಕ ಇಲಾಖೆ ಗಮನಕ್ಕೆ ತರಲಾಗಿದೆ. ಸರ್ಕಾರದ ನಿಯಮಾವಳಿಗಳಿಗೆ ಅನುಗುಣವಾಗಿ ನಾವು ನಡೆದುಕೊಳ್ಳಬೇಕಾಗುತ್ತದೆ. ಆರ್ಥಿಕ ಇಲಾಖೆಯಿಂದ ಅನುಮತಿ ಬಂದ ಕೂಡಲೇ ಕ್ರಮ ಜರುಗಿಸಲಾಗುವುದು.| ಟಿ.ರಾಘವೇಂದ್ರಕಾರ್ಯನಿರ್ವಾಹಕ ನಿರ್ದೇಶಕ, ಕ್ರೈಸ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
