ಕೋಲಾರ:ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿ ಅಷ್ಟೆ. ಜನರು ನನ್ನ ಕಷ್ಟ-ಸುಖಗಳಲ್ಲಿ ಭಾಗಿಯಾಗಿದ್ದಾರೆ, ಅವರಿಗೆ ಜವಾಬ್ದಾರಿ ಕೊಟ್ಟು ಆಮೇಲೆ ನಿವೃತ್ತಿಯಾಗುವೆ ಎಂದು ಮಾಜಿ ಸ್ಪೀಕರ್ ಕೆ.ಆರ್​. ರಮೇಶ್ ಕುಮಾರ್ ಹೇಳಿದರು.
ನಿವೃತ್ತಿಯಾಗಲು ಫ್ರೀಯಾಗಿರುವ ಮನುಷ್ಯ ನಾನಲ್ಲ‌. ಜನರ ಪ್ರೀತಿಯ ಬಂಧನದಲ್ಲಿದ್ದೇನೆ, ಇಲ್ಲಸಲ್ಲದ ವದಂತಿ ಹಬ್ಬಿಸಿದರೆ ಮನಸ್ಸಿಗೆ ನೋವಾಗುತ್ತೆ ಎಂದ ರಮೇಶ್​ ಕುಮಾರ್​, ನಾನು ಸರ್ಕಾರಿ ಸೇವೆಯಲ್ಲಿದ್ದರೆ ವಿಆರ್​ಎಸ್ ಕೊಡಬಹುದು. ನನ್ನ ರಾಜಕೀಯ ನಿವೃತ್ತಿ ಬಗ್ಗೆ ನಾನೆಲ್ಲೂ ಹೇಳಿಕೆ ಕೊಟ್ಟಿಲ್ಲ. ಯಾವುದೇ ಹೇಳಿಕೆ ಇಲ್ಲದೆ, ದಾಖಲೆ ಇಲ್ಲದೆ ನಮಗೆ ಮುಜುಗರ ತರುವ ಕೆಲಸ ಮಾಡಬೇಡಿ ಎಂದರು.
ಗ್ರಾಮ ಪಂಚಾಯಿತಿ ಚುನಾವಣೆ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್​ನ ಹಿರಿಯ ರಾಜಕಾರಣಿ ರಮೇಶ್​ಕುಮಾರ್, ‘ನಾನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಸಕ್ರಿಯ ರಾಜಕಾರಣದಿಂದ ಗೌರವಯುತವಾಗಿ ನಿವೃತ್ತಿ ಪಡೆಯುವೆ’ ಎಂದು ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂಬ ಸುದ್ದಿ ಸೋಮವಾರ ಎಲ್ಲೆಡೆ ಹರಿದಾಡಿತ್ತು. ಈ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರವಾಗಿತ್ತು. ಈ ಸಂಬಂಧ ಸಿಡಿಮಿಡಿಗೊಂಡ ರಮೇಶ್ ಕುಮಾರ್, ನಾನು ದೇವರಾಜ ಅರಸು ಕಾಲದಿಂದ ಸಕ್ರಿಯವಾಗಿದ್ದೇನೆ, ಆದ್ರೆ ನೀವು ನನ್ನ ಹರಿದು ತೋರಣ ಕಟ್ಟಿದ್ದೀರಾ ಎಂದು ಬೇಸರಿಸಿದರು.
‘ಪ್ರಸಕ್ತ ರಾಜಕಾರಣ ಬೇಸರ ತಂದಿದೆ. ಕಳೆದ 40 ವರ್ಷದಲ್ಲಿ ಇಂತಹ ಕಲುಷಿತ ರಾಜಕಾರಣವನ್ನು ನಾನೆಂದೂ ನೋಡಿರಲಿಲ್ಲ. ನನ್ನ ರಾಜಕೀಯ ಜೀವನದಲ್ಲಿ ನಾನೆಂದೂ ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಕಾಂಗ್ರೆಸ್​ನಲ್ಲಿದ್ದ ಕೆಲವರು ಹಣಕ್ಕಾಗಿ ತಮ್ಮ ತಲೆ ಮಾರಿಕೊಂಡು ಹೋದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ’ ಎಂದು ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದ ರಮೇಶ್​ ಕುಮಾರ್​, ‘ಇದೀಗ ನಾನು ಗ್ರಾಪಂ ಚುನಾವಣೆಗೆ ಎಂಟ್ರಿ ಕೊಡಬೇಕಿದೆ,ಈ ಅವಧಿ ಮುಗಿದ ಬಲಿಕ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಣೆ ಮಾಡಿ ತೋಟದ ಮನೆಯಲ್ಲಿ ಕಾಲ ಕಳೆಯುವೆ’ ಎಂದಿದ್ದಾರೆ ಎಂಬ ಸುದ್ದಿ ಸೋಮವಾರ ಎಲ್ಲೆಡೆ ಹರಿದಾಡಿತ್ತು.
ಈ ಕುರಿತು ಮಂಗಳವಾರ ಸುದ್ದಿಗಾರರ ಬಳಿ ಮಾತನಾಡಿದ ರಮೇಶ್​ಕುಮಾರ್​, ನನ್ನ ರಾಜಕೀಯ ನಿವೃತ್ತಿ ಕೇವಲ ವದಂತಿ ಅಷ್ಟೆ ಎಂದು ಸ್ಪಷ್ಟಪಡಿಸದರು.
ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಸಾಯುವ ಮುನ್ನ ಅಪ್ಪನಿಗೆ ಊಟ ಬಡಿಸಿದರು, ಆ ನಂತರ ಅಕ್ಕ-ತಂಗಿ ಇಬ್ಬರೂ ನೇಣಿಗೆ ಶರಣಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 12 =
Remember me
