
ಬೆಂಗಳೂರು:ಇಂಧನ ಸಂರಕ್ಷಣೆ ಮತ್ತು ಇಂಧನ ದಕ್ಷತೆ ನೀತಿ 2022-27ರ ಸಮಗ್ರ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲ ಇಲಾಖೆ ಹಾಗೂ ಇಂಧನ ವಲಯದ ಪ್ರಮುಖರೊಂದಿಗೆ ಸಮಾಲೋಚನೆ ನಡೆಯಿತು.ನಾಗರಬಾವಿಯ ಕ್ರೆಡಲ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಇಸಿ-ಇಇ ನೀತಿ ಅನುಷ್ಠಾನಕ್ಕೆ ನೋಡಲ್ ಏಜೆನ್ಸಿಯಾಗಿರುವ ಕ್ರೆಡಲ್, ನೀತಿಯ ಉದ್ದೇಶಗಳನ್ನು ಕಾರ್ಯರೂಪಕ್ಕೆ ತರುವ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಿತು.ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಮಾತನಾಡಿ, ಸುಸ್ಥಿರ ಇಂಧನ ಅಭ್ಯಾಸಗಳು ಮತ್ತು ಪರಿಸರ ಸ್ನೇಹಿ ಕ್ರಮಗಳಿಗೆ ಒತ್ತು ನೀಡುವ ಇಇ- ಇಸಿ ನೀತಿಯ ಅನುಷ್ಠಾನಕ್ಕಾಗಿ ಕ್ರಿಯಾ ಯೋಜನೆ ರೂಪಿಸಲು ಈ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದರು.ಎಂಎನ್‌ಆರ್‌ಇ ಹಾಗೂ ಬಿಇಇ ಜತೆಗೂ ಕ್ರೆಡಲ್ ನಿಕಟವಾಗಿ ಕಾರ್ಯನಿರ್ವಹಿಸುತ್ತಿದ್ದು, ವಿಶ್ವ ಸಂಪನ್ಮೂಲ ಸಂಸ್ಥೆ (ಡಬ್ಲ್ಯುಆರ್‌ಐ) ಯನ್ನು ಸಂಪರ್ಕಿಸಿದ್ದೇವೆ. ಇಂಧನ ಉಳಿತಾಯದ ಗುರಿ ಸಾಧಿಸುವ ಜತೆಗೆ ಇಂಗಾಲ ಹೊರಸೂಸಿಕೆ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಸಂಬಂಧಪಟ್ಟ ಎಲ್ಲರನ್ನು ತೊಡಗಿಸಿಕೊಳ್ಳುವುದು ನಮ್ಮ ಉದ್ದೇಶ ಎಂದರು.ಇಂಧನ ಸಚಿವರ ನಾಯಕತ್ವದಲ್ಲಿ, ಶುದ್ಧ ಇಂಧನ ಉತ್ಪಾದನೆ ಹಾಗೂ ನವೀನ ಇಂಧನ ಸಂಪನ್ಮೂಲಗಳ ಅಭಿವೃದ್ಧಿಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಸಾಂಪ್ರದಾಯಿಕ ಇಂಧನ ಮೂಲಗಳಿಗಿಂತ ನವೀಕರಿಸಬಹುದಾದ ಇಂಧನ ಕಡಿಮೆ ಖರ್ಚಿನ ಪರ್ಯಾಯ ಇಂಧನ ಮೂಲವಾಗಿದೆ ಎಂದರು.ಕಳೆದ ಏಪ್ರಿಲ್ 31ರವರೆಗೆ ರಾಜ್ಯದ ನವೀಕರಿಸಬಹುದಾದದ ಇಂಧನದ ಸ್ಥಾಪಿತ ಸಾಮರ್ಥ್ಯ 23.05 ಆಗಿದ್ದು, ಹಸಿರು ಇಂಧನ ವಲಯದಲ್ಲಿ ರಾಜ್ಯ ದೊಡ್ಡ ಪ್ರಮಾಣದ ಹೂಡಿಕೆ ಆಕರ್ಷಿಸುತ್ತಿದೆ. ಇಸಿ-ಇಇ ನೀತಿಯೊಂದಿಗೆ ಕೈಗಾರಿಕೆ, ಸಾರಿಗೆ, ಪುರಸಭೆಯ ಸೇವೆಗಳು ಮತ್ತು ಕೃಷಿ ಕ್ಷೇತ್ರಗಳಲ್ಲಿ ಗಮನಾರ್ಹ ಕ್ರಮಗಳನ್ನು ಜಾರಿಗೊಳಿಸಬಹುದು ಎಂದರು.ಕೆಎಸ್‌ಪಿಡಿಸಿಎಲ್ ಸಿಇಒ ಅಮರನಾಥ್, ವಿಶ್ವ ಸಂಪನ್ಮೂಲ ಸಂಸ್ಥೆಯ ಉಪ ನಿರ್ದೇಶಕ ದೀಪಕ್ ಕೃಷ್ಣನ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಹೆಚ್.ಎಂ.ಶ್ರೀನಿವಾಸ್, ಬಿಡಬ್ಲ್ಯುಎಸ್‌ಎಸ್‌ಬಿಯ ಮುಖ್ಯ ಇಂಜಿನಿಯರ್ ಪುರುಷೋತ್ತಮ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕೆ.ಎಂ. ಜಗದೀಶ್ ಉಪಸ್ಥಿತರಿದ್ದರು.ಕೃಷಿ ಇಲಾಖೆ, ಬಿಬಿಎಂಪಿ, ಬಿಡಿಎ, ಕೆಪಿಟಿಸಿಎಲ್, ಗ್ರಾಮೀಣಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆ ಸೇರಿದಂತೆ ನಾನಾ ಇಲಾಖೆಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದವು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
