ಬೆಂಗಳೂರು:ರಾಜ್ಯದಲ್ಲಿ ಕುಡಿಯುವ ನೀರಿಗೆ ತೀವ್ರ ಅಭಾವ ಇಲ್ಲ. ಕುಡಿಯುವ ನೀರಿನ ಪೂರೈಕೆ ಸಲುವಾಗಿಯೇ ಎಲ್ಲಾ ಜಿಲ್ಲಾ ಪಂಚಾಯತ್ ಸಿಇಓ ಗಳ ಖಾತೆಗೆ ಈಗಾಗಲೇ ಒಂದು ಕೋಟಿ ರೂ. ಹಣವನ್ನು ವರ್ಗಾಯಿಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 462 ಕೋಟಿ ಹಣ ಇದೆ. ಈ ಹಣವನ್ನು ನೀರು ಪೂರೈಕೆಗೆ ಬಳಸಲು ಸೂಚಿಸಲಾಗಿದೆ. ಮತ್ತಷ್ಟು ಹಣದ ಅಗತ್ಯ ಇದ್ದರೆ ಅದನ್ನೂ ಪೂರೈಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಅಗತ್ಯವಿದ್ದ ಸ್ಥಳಗಳಿಗೆ ಟ್ಯಾಂಕರ್ ಅಥವಾ ಖಾಸಗಿ ಬೋರ್ ಗಳ ಮೂಲಕ ನೀರು ಪೂರೈಕೆಗೆ ಮುಂದಾಗುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ರಾಜ್ಯದಲ್ಲಿ ಮೇವಿನ ಕೊರತೆ ಇಲ್ಲ. ಬರ ಘೋಷಣೆಗೆ ಮುನ್ನವೇ ಅಗತ್ಯ ಮೇವಿನ ದಾಸ್ತಾನಿಗೆ ಸೂಚಿಸಲಾಗಿದೆ. ಮೇವು ಖರೀದಿ ದಾಸ್ತಾನಿಗೆ ಮಾರ್ಗಸೂಚಿ ಸಿದ್ದಪಡಿಸಿದ್ದು 20 ಕೋಟಿ ರೂ. ನೀಡಲಾಗಿದೆ. ಅಲ್ಲದೆ, ರೈತರಿಗೆ ಮೇವಿನ ಭಿತ್ತನೆ ಬೀಜಗಳನ್ನು ಉಚಿತವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
161 ತಾಲೂಕುಗಳಲ್ಲದೆ ಇನ್ನೂ 34 ತಾಲೂಕುಗಳಲ್ಲಿಯೂ ಭಾಗಶಃ ಬರದ ಪರಿಸ್ಥಿತಿ ಇದೆ. ಆದರೆ, ಈ ತಾಲೂಕುಗಳನ್ನೂ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಹೀಗಾಗಿ 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ವೇಳೆ ಸಮೀಕ್ಷೆಗೆ ಒಳಪಟ್ಟ ತಾಲೂಕು ‘ಕೇಂದ್ರದ ಬರ ಮಾರ್ಗಸೂಚಿ’ಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು.
34 ತಾಲೂಕುಗಳು ಮಾತ್ರವಲ್ಲದೆ ಮತ್ತೂ 41 ತಾಲೂಕುಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ಅಕ್ಟೋಬರ್ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶವೂ ಇದೆ. ಹೀಗಾಗಿ ಈಗ ತಿಳಿಸಿರುವ 161 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ “ಬರ ಪೀಡಿತ” ಎಂದು ಘೋಷಿಸಲಾಗುವುದು. ಈ ಬಗ್ಗೆ ಕೇಂದ್ರಕ್ಕೆ ಮತ್ತೊಂದು ಮನವಿ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + 4 =
Remember me
