ಬೆಂಗಳೂರು:ಮಳೆ ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಇಂದು ಬರ ಘೋಷಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದೆ. ಬರ ಘೋಷಣೆಯ ನಂತರ ಪರಿಹಾರದ ಕ್ರಮಗಳ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಬರ ಘೋಷಣೆ ಪರಿಹಾರ ಕ್ರಮದ ಬಗ್ಗೆ ತಿಳಿಸಿದರು.
ಈಗಾಗಲೇ ಪ್ರತಿ ತಾಲೂಕುಗಳಲ್ಲೂ ಟಾಸ್ಕ್ ಫೋರ್ಸ್ ರಚನೆಗೆ ಸಿದ್ದತೆ ನಡೆಸಲಾಗಿದೆ. ಅಲ್ಲದೆ, ಬರ ಘೋಷಿಸುತ್ತಿದ್ದಂತೆ, ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ 100 ದಿನಗಳ ಮಾನವ ದಿನವನ್ನು 150 ದಿನಕ್ಕೆ ಹೆಚ್ಚಿಸಲಾಗುವುದು. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ಈಗಾಗಲೇ ಚರ್ಚಿಸಲಾಗಿದೆ ಎಂದು ಹೇಳಿದರು.
161 ತಾಲೂಕುಗಳಲ್ಲದೆ ಇನ್ನೂ 34 ತಾಲೂಕುಗಳಲ್ಲಿಯೂ ಭಾಗಶಃ ಬರದ ಪರಿಸ್ಥಿತಿ ಇದೆ. ಆದರೆ, ಈ ತಾಲೂಕುಗಳನ್ನೂ ಬರ ಪೀಡಿತ ಪ್ರದೇಶಗಳೆಂದು ಘೋಷಿಸಲು ಕೇಂದ್ರದ ಮಾರ್ಗಸೂಚಿ ಅಡ್ಡಿಯಾಗಿದೆ. ಹೀಗಾಗಿ 15 ದಿನಗಳ ನಂತರ ಸ್ಯಾಟಲೈಟ್ ಇಮೇಜ್ ಆಧರಿಸಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆಗೆ ಸೂಚಿಸಲಾಗುವುದು. ಈ ವೇಳೆ ಸಮೀಕ್ಷೆಗೆ ಒಳಪಟ್ಟ ತಾಲೂಕು ‘ಕೇಂದ್ರದ ಬರ ಮಾರ್ಗಸೂಚಿ’ಗೆ ಅನ್ವಯಿಸಿದರೆ ಎರಡನೇ ಹಂತದಲ್ಲಿ ಬರ ಘೋಷಣೆ ಮಾಡಲಾಗುವುದು ಎಂದರು.
34 ತಾಲೂಕುಗಳು ಮಾತ್ರವಲ್ಲದೆ ಮತ್ತೂ 41 ತಾಲೂಕುಗಳಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ. ಅಕ್ಟೋಬರ್ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ ಬರ ಘೋಷಣೆಗೆ ಅವಕಾಶವೂ ಇದೆ. ಹೀಗಾಗಿ ಈಗ ತಿಳಿಸಿರುವ 161 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ “ಬರ ಪೀಡಿತ” ಎಂದು ಘೋಷಿಸಲಾಗುವುದು. ಈ ಬಗ್ಗೆ ಕೇಂದ್ರಕ್ಕೆ ಮತ್ತೊಂದು ಮನವಿ (ಮೆಮೊರಾಂಡಮ್) ಸಲ್ಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
