ಬೆಂಗಳೂರು:ಕಳೆದ ನಾಲ್ಕೂವರೆ ವರ್ಷದಿಂದ ಆಸ್ತಿ ಮಾರ್ಗಸೂಚಿ ದರ ಏರಿಕೆ ಆಗಿಲ್ಲ. ಹೀಗಾಗಿ ದರ ಪರಿಷ್ಕರಣೆ ಮಾಡುವ ಚಿಂತನೆ ಇದೆ. ಮಾರುಕಟ್ಟೆ ದರಕ್ಕೆ ತಕ್ಕಂತೆ ಮಾರ್ಗಸೂಚಿ ದರ ಇರಬೇಕೆಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸಚಿವ ಕೃಷ್ಣ ಭೈರೇಗೌಡ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಸಾಮಾನ್ಯವಾಗಿ ಎರಡು ವರ್ಷಗಳಿಗೊಮ್ಮೆ ಮಾರ್ಗಸೂಚಿ ದರ ಏರಿಕೆ ಮಾಡಲಾಗುತ್ತದೆ. ಆದರೆ ಕಳೆದ ನಾಲ್ಕು ವರ್ಷದಿಂದ ದರ ಏರಿಕೆ ಆಗಿಲ್ಲ. ಈ ವಾರದಲ್ಲಿ ಸಭೆ ಮಾಡಿ ಪರಿಷ್ಕರಣೆ ದರದ ಬಗ್ಗೆ ತಿರ್ಮಾನಿಸುತ್ತೇವೆ. ಮಾರುಕಟ್ಟೆ ಬೆಲೆಗೂ ಗೈಡೆನ್ಸ್ ಬೆಲೆಗೂ ಸಾಕಷ್ಟು ವ್ಯತ್ಯಾಸ ಇರುವುದರಿಂದ ರೈತರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಗೈಡೆನ್ಸ್ ವ್ಯಾಲ್ಯೂ ರಿವಿಸನ್ ಬಗ್ಗೆ ಸಧ್ಯದಲ್ಲೇ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.
ದಸ್ತಾವೇಜು ನೋಂದಣಿಗಾಗಿ ಕಾವೇರಿ 2 ತಂತ್ರಾಂಶ ಅಳವಡಿಕೆ ಮಾಡಿರುವುದು ಯಶಸ್ವಿಯಾಗಿದೆ. ಕಳೆದ ವರ್ಷ ನೋಂದಣಿ ಮೂಲಕ ಸರ್ಕಾರಕ್ಕೆ 1200 ಕೋಟಿ ರೂಪಾಯಿ ಆದಾಯ ಬಂದಿತ್ತು. ಈ ವರ್ಷ 1300 ಕೋಟಿ ಆದಾಯ ಬಂದಿದೆ. ಚುನಾವಣೆ ಇದ್ದರೂ ಹೆಚ್ಚು ನೋಂದಣಿಯಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಒಳ್ಳೆಯ ಆದಾಯ ಬಂದಿದೆ ಎಂದು ಹೇಳಿದರು.
ಜನತೆಯ ಕೆಲಸ ಸರಾಗಿವಾಗಿ ಆಗಲು ಸರ್ಕಾರ ಪ್ರಮುಖ ಆದ್ಯತೆ ನೀಡುತ್ತಿದ್ದು, ನೋಂದಣಿ ಇಲಾಖೆಯಲ್ಲಿ ಹಲವು ಬದಲಾವಣೆ ತರಲಾಗಿದೆ. ಆಸ್ತಿ ನೋಂದಣಿ ಮಾಡಲು ಅಸ್ತವ್ಯಸ್ಥ ವ್ಯವಸ್ಥೆ ಇದ್ದು, ಸುಧಾರಣಾ ಕ್ರಮವಾಗಿ ಕಾವೇರಿ 1 ಮತ್ತು ಕಾವೇರಿ 2 ತಂತ್ರಾಂಶ ತರಲಾಗಿದೆ. ಎಲ್ಲಾ 256 ರಿಜಿಸ್ಟಾರ್ ಕೇಂದ್ರಗಳಲ್ಲೂ ಕಾವೇರಿ 2 ಸರಳಿಕೃತ ನೋಂದಣಿ ಸಧ್ಯದಲ್ಲೇ ಆರಂಭವಾಗಲಿದೆ ಎಂದು ಹೇಳಿದರು.
ಮುಂಗಾರು ತಡವಾಗಿ ಬಂದ ಹಿನ್ನೆಲೆಯಲ್ಲಿ ಮಳೆ ಕೊರತೆ ಉಂಟಾಗಿದೆ. ಮಳೆ ಚುರುಕಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಸಭೆ ನಡೆಸಿ ಜಲೈ ಮೊದಲ ವಾರದಲ್ಲಿ ಬರಗಾಲ ಘೋಷಣೆ ಮಾಡಬೇಕೋ? ಬೇಡವೋ ಎಂದು ನಿರ್ಧರಿಸಲಾಗುವುದು. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದ್ದು, ಮೋಡ ಬೀತ್ತನೆ ಮಾಡುವ ಬಗ್ಗೆ ಯೋಚಿಸಿಲ್ಲ ಎಂದು ಸಚಿವ ಕೃಷ್ಣೇ ಭೈರೇಗೌಡ ಸ್ಪಷ್ಟಪಡಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 19 =
Remember me
