ಬೆಂಗಳೂರು:ಕೆಆರ್‌ಎಸ್ ಅಣೆಕಟ್ಟಿನ ಬೀಗ ನಮ್ಮ ಕೈಯಲ್ಲಿ ಇಲ್ಲ? ಅದು ಕೇಂದ್ರ ಸರ್ಕಾರದ ಕೈಯಲ್ಲಿದೆ. ಈ ಕಾನೂನು ಬಗ್ಗೆ ಬಸವರಾಜ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೆ? ರಾಜಕಾರಣ ಯಾವ ವಿಚಾರದಲ್ಲಿ ಮಾಡಬೇಕೊ ಅದರಲ್ಲಿ ಮಾಡಬೇಕು, ಎಲ್ಲ ವಿಚಾರದಲ್ಲಿಯೂ ಮಾಡಬಾರದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸಿಎಸ್‌ಆರ್ ಅನುದಾನ ಸದ್ಬಳಕೆ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸರ್ಕಾರವು ರಾಜ್ಯದ ರೈತರ ಹಿತ ಮರೆತು ತಮಿಳುನಾಡಿಗೆ ಕಾವೇರಿ ನೀರು ಹರಿಸಿದೆ’ ಎಂಬ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ, ತಮಿಳುನಾಡಿಗೆ ನೀರು ಬಿಡುವವರು ನಾವಲ್ಲ. ಅದರ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ. ಈ ಬಗ್ಗೆ ಬೊಮ್ಮಾಯಿ ಅವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.
ರಾಜ್ಯದ ರೈತರ ಹಿತ ಕಾಯುವುದಕ್ಕೆ ಸರ್ಕಾರವು ಬದ್ಧವಾಗಿದೆ. ಈ ಕಾರಣಕ್ಕೆ ಈಗಾಗಲೇ ನಾನು ಸಚಿವನಾದ ಬಳಿಕ 2 ಬಾರಿ ಬೆಳೆಗಳಿಗೆ ನೀರು ಹರಿಸಲು ಅನುಮತಿ ನೀಡಿದ್ದೇನೆ. ತಮಿಳುನಾಡಿನವರು 27 ಟಿಎಂಸಿ ನೀರು ಕೇಳಿದ್ದಾರೆ, ಅವರು ಕೇಳಿದಷ್ಟು ನೀರು ಕೊಟ್ಟಿಲ್ಲ. ತಮಿಳುನಾಡು ಇತ್ತೀಚೆಗೆ ನಡೆದ ಕಾವೇರಿ ಟ್ರಿಬ್ಯುನಲ್ ಸಭೆಯನ್ನು ಬಹಿಷ್ಕರಿಸಿ ಹೋಗಿದ್ದಾರೆ ಅವರು, ಹೀಗೆ ಸಂಘರ್ಷ ಮಾಡಿಕೊಂಡು ಇರಲು ಆಗುತ್ತದೆಯೇ? ಸರ್ಕಾರ ನಡೆಸುವವರು ಎಲ್ಲ ರೀತಿಯಲ್ಲಿಯೂ ಆಲೋಚನೆ ಮಾಡಬೇಕು. ನಾವು ಕಾನೂನು ತಜ್ಞರ ಸಲಹೆ ಕೇಳಿ ಅದರ ಅನುಗುಣವಾಗಿ ಹೆಜ್ಜೆ ಇಡಬೇಕಿದೆ. ಇಲ್ಲದಿದ್ದರೆ ಇನ್ನಷ್ಟು ದೊಡ್ಡ ನಷ್ಟ ಅನುಭವಿಸಬೇಕಾಗುತ್ತದೆ ಎಂದರು.
ರೈತರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, ಪ್ರತಿಭಟನೆ ಮಾಡುತ್ತಿರುವವರು ನಮ್ಮ ರೈತರೇ, ಪ್ರತಿಭಟನೆ ಅವರ ಹಕ್ಕು. ಆದರೆ ಸುಪ್ರಿಂ ಕೋರ್ಟ್ ನಮ್ಮ ಮಾತು ಕೇಳಬೇಕಲ್ಲ. ರೈತರಿಗೂ ನ್ಯಾಯಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.
ಕಳೆದ 30-40 ವರ್ಷಗಳಲ್ಲಿಯೇ ಈ ವರ್ಷ ಕಡಿಮೆ ಪ್ರಮಾಣದ ಮಳೆ ಬಿದ್ದಿದೆ. ಇಂತಹ ಸಂಕಷ್ಟದ ಕಾಲದಲ್ಲಿಯೂ ರಾಜ್ಯದ ರೈತರ ಪರವಾಗಿದ್ದೇವೆ ಹಾಗೂ ಕಾನೂನಿಗೂ ಗೌರವ ನೀಡುತ್ತಿದ್ದೇವೆ ಎಂಬ ಕಾರಣಕ್ಕೆ ನೀರು ಬಿಟ್ಟಿದ್ದೇವೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 10 =
Remember me
