ಬೆಂಗಳೂರು:ಹಿಂದು ಧರ್ಮ ಧರ್ಮವೇ ಅಲ್ಲ. ಹಿಂದು ಎಂಬ ಶಬ್ದ ಅವಮಾನಕರ ಎಂದು ಹೇಳಿಕೆ ನೀಡಿದ್ದ ಪ್ರೊ. ಕೆ.ಎಸ್.ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರಗೆ ಬಾರ್ ಕೌನ್ಸಿಲ್ ಉಪಸಮಿತಿಯು ವಕೀಲಿಕೆಯಿಂದ ಅಮಾನತು ಮಾಡುವಂತೆ ಶಿಫಾರಸು ಮಾಡಿದೆ.
ಪ್ರೊ.ಭಗವಾನ್​ ಅವರು ಹಿಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದ ವಕೀಲೆ ಮೀರಾ, ದೂರು ದಾಖಲಿಸಿದ್ದರು. ಈ ಕೇಸ್​ನ ಸಂಬಂಧ ಫೆ.4ರಂದು ವಿಚಾರಣೆ ನಡೆಸಿದ ಬೆಂಗಳೂರಿನ 2 ನೇ ಎಸಿಎಂಎಂ ನ್ಯಾಯಾಲಯ, ಜಾಮೀನು ನೀಡಿತ್ತು. ಕೋರ್ಟ್​ನಿಂದ ಭಗವಾನ್​ ಅವರು ಹೊರ ಬರುತ್ತಿದ್ದಂತೆ ಸಿಟ್ಟಿಗೆದ್ದ ಮೀರಾ, ‘ಇಷ್ಟು ವಯಸ್ಸು ಆಗಿದೆ. ಇನ್ನು ನಾಚಿಕೆಯಾಗಲ್ವಾ? ರಾಮನ ಬಗ್ಗೆ, ಹಿಂದು ಧರ್ಮದ ಬಗ್ಗೆ ಮಾತಾನಾಡ್ತೀರಾ?’ ಎಂದು ಮಸಿ ಬಳಿದು ಆಕ್ರೋಶ ಹೊರಹಾಕಿದ್ದರು.ಇದನ್ನೂ ಓದಿರಿಹತ್ತು ಆನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ.. ಏನು ಮಾಡಲಿ?: ಪ್ರಜ್ವಲ್​ ರೇವಣ್ಣ
ತನ್ನ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಪ್ರೊ. ಭಗವಾನ್‌ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್‌ ದಾಖಲಾಗಿದೆ.
ಇನ್ನು ಒಬ್ಬ ವಕೀಲೆ ಆಗಿ ಕೋರ್ಟ್​ ಆವರಣದಲ್ಲಿ ದುರ್ನಡತೆ ತೋರಿದ ಆರೋಪ ಮೀರಾ ಮೇಲಿದೆ. ಈ ಸಂಬಂಧ ಕರ್ನಾಟಕ ಬಾರ್ ಕೌನ್ಸಿಲ್​ಗೆ ವಿಚಾರಣಾ ವರದಿ ಸಲ್ಲಿಕೆಯಾಗಿದ್ದು, ಶಿಸ್ತು ವಿಚಾರಣೆ ಮುಗಿಯುವವರೆಗೂ ಮೀರಾ ವಕೀಲಿಕೆಯ ಸನ್ನದು ಅಮಾನತು ಪಡಿಸುವಂತೆ ಬಾರ್ ಕೌನ್ಸಿಲ್ ಉಪಸಮಿತಿ ಶಿಫಾರಸು ಮಾಡಿದೆ. ಸದಸ್ಯರಾದ ಎನ್.ಶಿವಕುಮಾರ್, ಎಂ.ದೇವರಾಜ, ಎಂ.ಎನ್.ಮಧುಸೂದನ್ ಅವರನ್ನೊಳಗೊಂಡ ಉಪಸಮಿತಿ ವಿಚಾರಣೆ ಸಮಿತಿಯಲ್ಲಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಅವನು ಬಂದಾಗ ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ… ಎಚ್​ಡಿಕೆ ವಿರುದ್ಧ ನಾಲಗೆ ಹರಿಬಿಟ್ಟ ಯೋಗೇಶ್ವರ್​

Video| ದೇವರ ಹೆಸರಲ್ಲಿ ಬೆತ್ತಲೆ ಸೇವೆ! ನಡುರಸ್ತೆಯಲ್ಲಿ ಬೆತ್ತಲೆ ಮಹಿಳೆಯ ಮೆರವಣಿಗೆ…

ನೀವು ಶಾಸಕರಾದ್ರೆ ನಮಗೇನ್ರಿ? ಸುಮ್ಮನೆ ಹಣ ಕಟ್ಟಿ… ಶಾಸಕನಿಗೆ ಟೋಲ್​ ಸಿಬ್ಬಂದಿ ಧಮ್ಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
