ಬೆಂಗಳೂರು:40% ಕಮಿಷನ್​ ವಿರುದ್ಧ ‘ಪೇಸಿಎಂ’ ಅಭಿಯಾನ ನಡೆಸಿ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕಾಂಗ್ರೆಸ್​, ಇದೀಗ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಅವರ ಭಾವಚಿತ್ರವುಳ್ಳ ನೋಟಿನ ಮಾದರಿಯನ್ನ ತಯಾರಿಸಿ ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದೆ. ಭ್ರಷ್ಟ ಜನತಾ ಪಕ್ಷ, ಕುದುರೆ ವ್ಯಾಪಾರ, 500 ಕೋಟಿ ಮೌಲ್ಯ… ಎಂಬಿತ್ಯಾದಿ ಅಕ್ಷರಗಳು ಈ ನೋಟಿನ ಮಾದರಿಯಲ್ಲಿದೆ.
ನೋಟಿನ ಮೇಲೆ ಈಶ್ವರಪ್ಪರ ಭಾವ ಚಿತ್ರವುಳ್ಳ ಫೋಟೋವನ್ನು ಟ್ವೀಟ್​ ಮಾಡಿರುವ ರಾಜ್ಯ ಕಾಂಗ್ರೆಸ್​, ‘ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ರೂ. ಹೆಚ್ಚಲ್ಲ ಅಲ್ಲವೇ ಕರ್ನಾಟಕ ಬಿಜೆಪಿ? ಕೆ.ಎಸ್​.ಈಶ್ವರಪ್ಪ ಅವರೇ ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು, ಆಪರೇಷನ್ ಕಮಲದ 500 ಕೋಟಿ ರೂ. ಎಣಿಸುವುದಕ್ಕಾ ಅಥವಾ 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ರೂ. ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ?’ ಎಂದು ಪ್ರಶ್ನಿಸಿದೆ.
ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ@BJP4Karnataka?@ikseshwarappaಅವರೇ,ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ?
500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ?pic.twitter.com/raTEQbdEm8
— Karnataka Congress (@INCKarnataka)November 4, 2022

‘ಈಶ್ವರಪ್ಪ ಅವರು ಕಾಂಗ್ರೆಸ್ ಶಾಸಕರಿಗೆ 500 ಕೋಟಿ ರೂ. ಆಮಿಷ ಒಡ್ಡಿದ್ದೆ ಎಂದು ಹೇಳಿರುವುದರಲ್ಲಿ ಯಾವ ಆಶ್ಚರ್ಯ- ಅನುಮಾನವೂ ಇಲ್ಲ. ತೆಲಂಗಾಣದಲ್ಲಿ 150 ಕೋಟಿಯ ಡೀಲ್‌ನಲ್ಲೂ ನಿಮ್ಮದೇ ನೋಟ್ ಎಣಿಸುವ ಮಷಿನ್​ ಕೆಲಸ ಮಾಡಿತ್ತೇ ಈಶ್ವರಪ್ಪನವರೇ? 40% ಕಮಿಷನ್ ಲೂಟಿಯನ್ನು ಕರ್ನಾಟಕದ ನಂತರ ತೆಲಂಗಾಣದಲ್ಲಿ ಇನ್ವೆಸ್ಟ್ ಮಾಡ್ತಿದೀರಾ?’ ಎಂದು ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್​ ಟೀಕಿಸಿದೆ.
ನಟಿ ಅದಿತಿ ಮದುವೆ ಡೇಟ್ ಫಿಕ್ಸ್: ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿದ ಆ ಸಾಲು ನೋಡಿ ಅಭಿಮಾನಿಗಳು ಫುಲ್​ ಖುಷ್

ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 17 =
Remember me
