ಹುಬ್ಬಳ್ಳಿ:‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಆಪರೇಷನ್ ಕಮಲ ಮುಳುವಾಯ್ತು. ಕಾಂಗ್ರೆಸ್ ನಾಯಕರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿರುವುದಕ್ಕೆ ಸಮಸ್ಯೆ ಅನುಭವಿಸುತ್ತಿದ್ದೇವೆ’ ಎನ್ನುತ್ತಾ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪರೋಕ್ಷವಾಗಿ ಆಪರೇಷನ್ ಕಮಲದ ವಿರುದ್ದ ಗರಂ ಆದರು.
ಹುಬ್ಬಳ್ಳಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾತನಾಡುತ್ತಾ, ‘ಬಿಜೆಪಿ ಪಕ್ಷದಲ್ಲಿ, ಅಲ್ಲಲ್ಲಿ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್​ನ‌ ಗಾಳಿ ಸೋಕಿರುವುದೇ ಇದಕ್ಕೆ ಕಾರಣ. ಬಹಿರಂಗವಾಗಿ ಅಡ್ಜೆಸ್ಟ್​ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗುತ್ತಿರುವುದು ದುರ್ದೈವ. ಇಂತಹದ್ದೆನ್ನಲ್ಲ ನಾಲ್ಕು ಗೋಡೆ ಮಧ್ಯೆ ಕೂತು ಮಾತನಾಡಬೇಕು. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರೊಂದಿಗೆ ನಾನು ಮಾತನಾಡುತ್ತೇನೆ’ ಎಂದು ತಿಳಿಸಿದರು.
ಇದನ್ನೂ ಓದಿ:1983ರ ವಿಶ್ವಕಪ್ ಗೆದ್ದಾಗ ಟೀಂ ಇಂಡಿಯಾ ಆಟಗಾರರ ದಿನ ಭತ್ಯೆ ಎಷ್ಟಿತ್ತು? ಇಲ್ಲಿದೆ ನೋಡಿ ವಿವರ…
ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿದ್ದ ಐದು ಗ್ಯಾರಂಟಿಗಳ ಬಗ್ಗೆ ಈವರೆಗೂ ಗೊಂದಲ ಬಗೆ ಹರಿದಿಲ್ಲ. ಗ್ಯಾರಂಟಿಳನ್ನು ಅನುಷ್ಠಾನ ಮಾಡುತ್ತೇವೆ ಎನ್ನುತ್ತಾ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ ಎಂದು ಈಶ್ವರಪ್ಪ ಕಿಡಿಕಾರಿದರು.
ಮೊದಲ ಕ್ಯಾಬಿನೇಟ್​ನಲ್ಲೇ ನಿರುದ್ಯೋಗಿ ಯುವಕರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಕೇಂದ್ರ ಸರ್ಕಾರ ಉಚಿತವಾಗಿ ಅಕ್ಕಿ ಕೊಡುತ್ತಿರುವ ವಿಚಾರದಲ್ಲಿ ಯಾರೊಬ್ಬರೂ ಅಭಿನಂದನೆ ಸಲ್ಲಿಸುತ್ತಿಲ್ಲ. ಆದರೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ನಾಚಿಕೆಗೇಡಿನ‌ ಹೇಳಿಕೆ ನೀಡುತ್ತಾರೆ. ಇವರಿಗೆ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ? ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಸರ್ಕಾರಿ ಬಸ್​ ಹತ್ತುತ್ತಿದ್ದ ಮಹಿಳೆ ಕೈ ಕತ್ತರಿಸಲ್ಪಟ್ಟಿತಾ? ವೈರಲ್ ವಿಡಿಯೋ ಬಗ್ಗೆ ಸಾರಿಗೆ ಇಲಾಖೆ ಸ್ಪಷ್ಟನೆ ಹೀಗಿದೆ…
ಸರ್ಕಾರದ ಗ್ಯಾರಂಟಿ ಭರವಸೆಗಳ ವಿರುದ್ಧ ರಾಜ್ಯದ ಜನ ಆಕ್ರೋಶಗೊಂಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ, ಗೃಹಜ್ಯೋತಿ ಯೋಜನೆಗಳ ಕುರಿತು ಇನ್ನೂ ಸ್ಪಷ್ಟತೆ ಸಿಕ್ಕಿಲ್ಲ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹಣ ಯಾವ ರೀತಿ ಹೊಂದಿಸುತ್ತಾರೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ. ಕಾಂಗ್ರೆಸ್ ಸರ್ಕಾರದ ಈ ನ್ಯೂನತೆಗಳ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕು. ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ನಾವು ಜಾರಿ ಮಾಡಿದ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ಹೊರಟಿದೆ ಎಂದು ಆರೋಪಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
