ಶಿವಮೊಗ್ಗ:ಮೈಕ್‌ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಇಲ್ಲದೆ ಕೂಗಿದರೆ ಆಜಾನ್ ಕೇಳುವುದಿಲ್ಲವೇ? ಅಲ್ಲಾನೇನು ಕಿವುಡನೇ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ವಿವಾದದ ಕಿಡಿ ಹೊತ್ತಿಸಿದ್ದರು. ಈಶ್ವರಪ್ಪ ಮಾತಿಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಕೆಲವೆಡೆ ಪ್ರತಿಭಟನೆಗಳೂ ನಡೆದಿದ್ದವು.
ಅಂತೆಯೇ ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ಯಾವುದೇ ಪ್ರತಿಭಟನೆಯನ್ನು ಲೆಕ್ಕಕ್ಕೆ ಇಟ್ಟುಕೊಳ್ಳುವುದಿಲ್ಲ. ಜನಸಾಮಾನ್ಯರ ಬಾಯಲ್ಲಿ ಏನಿದೆಯೋ ಅದನ್ನು ಬಾಯಿಬಿಟ್ಟು ಹೇಳುತ್ತೇನೆ. ಅನೇಕರಿಗೆ ಕೆಲ ವಿಚಾರಗಳನ್ನು ಮುಕ್ತವಾಗಿ ಹೇಳುವುದಕ್ಕೆ ಆಗುವುದಿಲ್ಲ. ಜನಸಾಮಾನ್ಯರ ಭಾವನೆಗಳನ್ನು ಹೇಳುವವನಾಗಿ ಯಾವುದೇ ಪ್ರತಿಭಟನೆಗಳಿಗೆ ಹೆದರುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.
ಅಜಾನ್ ಕೂಗೋದ್ರೀಂದ ವಿದ್ಯಾರ್ಥಿಗಳಿಗೆ ಎಷ್ಟು ತೊಂದರೆಯಾಗುತ್ತಿದೆ ಎಂದು ಅವರ ಪೋಷಕರಿಗೆ ಗೊತ್ತಿದೆ. ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಎಷ್ಟು ತೊಂದರೆಯಾಗಿದೆ ಎಂದು ಅವರಿಗೆ ಗೊತ್ತು. ಇರುವುದನ್ನು ಬಹಿರಂಗವಾಗಿ ಹೇಳುವುದಕ್ಕೆ ನಾನು ಹಿಂದೆ ಮುಂದೆ ನೋಡಲ್ಲ. ಬೇರೆಯವರಿಗೆ ತೊಂದರೆಯಾಗದಂತೆ ಸೌಂಡ್ ಇಡಲು ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟಿದೆ. ರಾತ್ರಿ 10ರಿಂದ ಬೆಳಿಗ್ಗೆ 6 ವರೆಗೆ ಸಂಪೂರ್ಣ ಬ್ಯಾನ್ ಆಗಿದೆ‌ ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 10 =
Remember me
