ಶಿವಮೊಗ್ಗ:ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಮಾಡಿರುವುದು ಖಂಡನೀಯ. ಇದರಿಂದ ಹಿಂದೂ ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್‌ನಂತಹ ಘಟನೆಗಳು ಹೆಚ್ಚುತ್ತಿವೆ. ನಿಮ್ಮ ಮನೆಯ ಹೆಣ್ಣು ಮಕ್ಕಳು ಮತಾಂತರಗೊಂಡರೆ ಏನು ಮಾಡುತ್ತೀರಿ?. ಕೂಡಲೇ ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರ ವಹಿಸುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಕಾಂಗ್ರೆಸ್ ಮೋಸದ ಸರ್ಕಾರ. ಹಿಂದೂ ವಿರೋಧಿ ಸರ್ಕಾರವಾಗಿದ್ದು, ಗ್ಯಾರಂಟಿಗಳನ್ನು ಘೋಷಿಸಿ ಹಲವರ ಹೊಟ್ಟೆ ಮೇಲೆ ಬರೆ ಎಳೆಯುತ್ತಿದೆ. ಬಡ ಜನರಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಹೊರಟಿದೆ. ಇವರು ಗ್ಯಾರಂಟಿ ಕೊಡುವಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದರೇನು?, ಅವರು ಒಪ್ಪಿದ್ದರೇನು ಎಂದು ಪ್ರಶ್ನಿಸಿದರು.
ಇದೀಗ ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಗ್ಯಾರಂಟಿ ಕೊಡಲಾಗದವರು ಇನ್ನೊಬ್ಬರ ಮೇಲೆ ಆರೋಪ ಹೊರಿಸುವುದಲ್ಲ. ಹೇಳಿದಂತೆ ಅಕ್ಕಿ ಕೊಡಬೇಕು. ಆಗದಿದ್ದರೆ ಅಷ್ಟೇ ಮೊತ್ತದ ಹಣ ಕೊಡಬೇಕು. ಇಲ್ಲದಿದ್ದರೆ ಬಡವರ ಶಾಪ ನಿಮ್ಮನ್ನು ತಟ್ಟದೆ ಬಿಡುವುದಿಲ್ಲ ಎಂದರು.
ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ 10 ಕೋಟಿ ರೂ. ದೇಣಿಗೆ ನೀಡುತ್ತೇನೆ; ಜೈಲಿನಿಂದಲೇ ಪತ್ರ ಬರೆದ ಸುಕೇಶ್‌ ಚಂದ್ರಶೇಖರ್‌

ಇಲ್ಲಿ ಸಿಗುತ್ತೆ ನಾನ್​​ವೆಜ್ ಪಾನಿಪೂರಿ: ಎಂದಾದ್ರು ಚಿಕನ್-ಮಟನ್ ಗೋಲ್​​ಗಪ್ಪಾಗಳನ್ನು ಟೇಸ್ಟ್​​ ಮಾಡಿದ್ದೀರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 6 =
Remember me
