ಶಿವಮೊಗ್ಗ :ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ತಮಿಳು ನಾಡಗೀತೆ ಪ್ಲೇ ಮಾಡಿದ ಆಯೋಜಕರು. ಈ ಮೂಲಕವಾಗಿ ಶಿವಮೊಗ್ಗದಲ್ಲಿ ಬಿಜೆಪಿ‌ ನಾಯಕರು ಎಡವಟ್ಟು ಮಾಡಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ಆಯೋಜಕರು ತಮಿಳು ನಾಡಗೀತೆ ಪ್ಲೇ ಮಾಡಿದ್ದಾರೆ. ಸಮಾವೇಶ ಆರಂಭಕ್ಕೂ ಮುನ್ನ ಸಂಘಟಕರು ತಮಿಳು ನಾಡಗೀತೆ ಆಡಿಯೋ ಪ್ಲೇ ಮಾಡಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಮಿಳು ನಾಡಗೀತೆಗೆ ಎದ್ದುನಿಂತು ಗೌರವ ಸೂಚಿಸಿದ್ದಾರೆ. ವಿಧಾನಸಭಾ ಚುನಾವಣಾ ಕರ್ನಾಟಕ ಸಹ ಪ್ರಭಾರಿ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ 66 ಕೋಟಿ ರೂ. ಮನೆ ಖರೀದಿಸಿದ ಡೋಲೋ 650 ಸಿಇಒ..ಕೆಲಕಾಲ ನಾಡಗೀತೆ ಪ್ಲೇ ಆಗುತ್ತಿದ್ದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚೆತ್ತುಕೊಂಡಿದ್ದು, ಕೂಡಲೇ ಡಯಾಸ್ ಬಳಿ ತೆರಳಿ ತಮಿಳು ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚನೆ ನೀಡಿದ್ದಾರೆ. ಬಳಿಕ ಕನ್ನಡ ನಾಡಗೀತೆ ಹಾಕಿಸಿ ಈಶ್ವರಪ್ಪ ಡ್ಯಾಮೇಜ್ ಕಂಟ್ರೋಲ್​​ಗೆ ಮುಂದಾಗಿದ್ದಾರೆ. ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ‌ ಭಾಗಿಯಾಗಿದ್ದರು
VIDEO| ಸಫಾರಿಗೆ ಹೋದ ಪ್ರವಾಸಿಗರ ಮೇಲೆ ಎಗರಿದ ಹುಲಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − nine =
Remember me
