ಶಿವಮೊಗ್ಗ:ರಾಜ್ಯ ವಿಧಾನಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಈ ಮಧ್ಯೆ ರಾಜಕೀಯ ಪಕ್ಷಗಳ ನಾಯಕರು ಮತಬೇಟೆಯಲ್ಲಿ ತೊಡಗಿದ್ದು ವಿಭಿನ್ನ ಕಸರತ್ತಿಗೆ ಕೈ ಹಾಕಿದ್ದಾರೆ.
ಇನ್ನು ಕರ್ನಾಟಕದ ಹೈ ವೋಲ್ಟೇಜ್​ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾದ ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ವಿಭಿನ್ನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.
ಅನ್ಯ ರಾಜ್ಯಗಳಿಂದ ಕರ್ನಾಟಕ್ಕೆ ವಲಸೆ ಬಂದಿರುವವರ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನಾಯಕರು ಶಿವಮೊಗ್ಗ ನಗರದಲ್ಲಿ ತಮಿಳು ಭಾಂದವರ ಸಮಾವೇಶವನ್ನು ನಡೆಸುವ ಮೂಲಕ ಸುದ್ದಿಯಲ್ಲಿದ್ದಾರೆ.
ಇನ್ನು ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 25 ಸೀಟ್ ನೀಡಿದ್ರು ರಾಜ್ಯದ ಜನರು ಧೈವ ಭಕ್ತಿ, ರಾಷ್ಟ್ರ ಭಕ್ತಿಗೆ ಬೆಲೆ ಕೊಡ್ತಾರೆ. ಮುಂಬರುವ ಚುನಾವಣೆಯಲ್ಲಿ 28 ಸ್ಥಾನಗಳನ್ನು ಜನ ಗೆಲ್ಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ಧಾರೆ.
ಇದನ್ನೂ ಓದಿ:ಮಾನನಷ್ಟ ಮೊಕದ್ದಮೆ ಪ್ರಕರಣ; ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶೆ
ಅಣ್ಣಾಮಲೈ ಅವರು ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡ್ತಿದ್ದಾರೆ. ಶಿವಮೊಗ್ಗದಲ್ಲಿ ಏಳು ಬಾರಿ ನಾನು ಚುನಾವಣೆಗೆ ಸ್ಫರ್ಧೆ ಮಾಡಿದ್ದೇನೆ ಅದರಲ್ಲಿ 5 ಬಾರಿ ನೀವೆಲ್ಲರೂ ಸೇರಿ ನನ್ನ ಗೆಲ್ಲಿಸಿದ್ದೀರಿ.
ಆ ಸಂದರ್ಭದಲ್ಲಿ ಚನ್ನಬಸಪ್ಪನಂತಹ ಸಾವಿರಾರು ಜನರು ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ಈಗ ಪಕ್ಷ ಚೆನ್ನಬಸಪ್ಪ ಅವರಿಗೆ ಅವಕಾಶ ಮಾಡಿಕೊಟ್ಟಿದೆ ಜಾತಿಯನ್ನು ನೋಡದೇ ಧರ್ಮ, ರಾಷ್ಟ್ರಕ್ಕಾಗಿ ನೀವು ನನ್ನ ಗೆಲ್ಲಿಸಿದ್ರೀ.. ಈ ಬಾರಿ ಹಾಗೇ ಆಗಬೇಕು ಎಂದು ಮಾತನಾಡುವ ವೇಳೆ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಗೆಲ್ಲಿಸಲು ನೀವೆಲ್ಲರೂ ಪ್ರಯತ್ನ ಮಾಡಬೇಕು ಇವತ್ತು ಬೆಳಿಗ್ಗೆ ಕೂಡ ಪ್ರಧಾನಿ ಮೋದಿ ಕಾರ್ಯಕರ್ತರಿಗೆ ಸಲಹೆ ಸೂಚನೆ ನೀಡಿದ್ದಾರೆ.
ಚೆನ್ನಬಸಪ್ಪ 60 ಸಾವಿರ ಅಂತರದಲ್ಲಿ ಗೆಲ್ಲಲು ಎಲ್ಲರೂ ಕೆಲಸ ಮಾಡಬೇಕು ಅವರು ಗೆದ್ದರೇ ನಾನು ಗೆದ್ದ ಹಾಗೆ ಎಂದು ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + six =
Remember me
