ಬೆಂಗಳೂರು:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (ಕೆಎಸ್‌ಎಲ್‌ಯು) ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಿದೆ.ಸೆಪ್ಟೆಂಬರ್‌ನಲ್ಲಿ ನಡೆಸಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್‌ನಲ್ಲಿ ನಡೆಸಲು ನಿರ್ಧರಿಸಿದೆ.ರಾಜ್ಯ ಕಾನೂನು ಸಚಿವರೊಂದಿಗೆ ಸಮಾಲೋಚಿಸಿದ ನಂತರ ಪರೀಕ್ಷೆಗಳನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.ಅಂತಿಮ ವರ್ಷದ ಪರೀಕ್ಷೆಗಳ ಹೊರತಾಗಿ, ಅಕ್ಟೋಬರ್ 5 ರಂದು ನಿಗದಿಯಾಗಿದ್ದ ಇಂಟರ್​ಮೀಡಿಯೇಟ್ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಬಾರ್ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ಅಂತಿಮ ವರ್ಷದ ಪರೀಕ್ಷೆಗಳನ್ನು ಅಕ್ಟೋಬರ್‌ನಲ್ಲಿ ಆನ್‌ಲೈನ್‌ನಲ್ಲಿ ನಡೆಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನು ಓದಿ:ಮೂರೇ ವಾರದಲ್ಲಿ ಬ್ರಿಟನ್​ ಜನರಿಗೆ ಸಿಗಲಿದೆ ಕರೊನಾ ಲಸಿಕೆ; ತುರ್ತು ಬಳಕೆಗೆ ಕಾಯ್ದೆ ತಿದ್ದುಪಡಿ; ಭಾರತಕ್ಕೂ ಇದೆ ಅವಕಾಶ
COVID-19 ರೋಗವನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಸೆಮಿಸ್ಟರ್‌ಗಳ ಪರೀಕ್ಷಾ ಅಧಿಸೂಚನೆಯನ್ನು ಹಿಂಪಡೆಯುವಂತೆ ಮಾಜಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್‌ಎಲ್‌ಯು) ಒತ್ತಾಯಿಸಿದ ಕೆಲವೇ ದಿನಗಳ ನಂತರ ನಿರ್ಧಾರಕ್ಕೆ ಬರಲಾಗಿದೆ.ವಿಶ್ವವಿದ್ಯಾಲಯದ ಆನ್‌ಲೈನ್ ತರಗತಿಗಳು ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿವೆ. ಲಾಕ್‌ಡೌನ್‌ನಿಂದಾಗಿ ಏಪ್ರಿಲ್ ದಿಂದ ಕಳೆದ ಸಮಯವನ್ನು ಸರಿದೂಗಿಸಲು ಆನ್‌ಲೈನ್ ತರಗತಿಗಳನ್ನು ನಡೆಸಲಾಗುವುದು. ಇದಲ್ಲದೆ, ತರಗತಿಗಳು ನಿಯಮಿತವಾಗಿ ಪುನರಾರಂಭಗೊಂಡ ನಂತರ ವಿವಿಯ ಸೆಮಿಸ್ಟರ್ ಮತ್ತು ಇಂಟರ್​ಮೀಡಿಯೇಟ್ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ:ಕೋವಿಡ್​ನಿಂದಾಗಿ ಚುನಾವಣೆ ನಿಲ್ಲಿಸೋಕಾಗಲ್ಲ; ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್​
ಮಾರ್ಚ್ ನಲ್ಲಿ ನಡೆದ ಇಂಟರ್ನಲ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಯ ಆಧಾರದ ಮೇಲೆ ಅವರಿಗೆ ತಾತ್ಕಾಲಿಕವಾಗಿ ಮುಂದಿನ ಸೆಮಿಸ್ಟರ್‌ಗೆ ಹೋಗಲು ಅವಕಾಶ ನೀಡಲಾಗುವುದು. ಆದಾಗ್ಯೂ, ವಿವಿ ಪರೀಕ್ಷೆ ನಡೆಸಲು ನಿರ್ಧರಿಸಿದಾಗ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಹಾಜರಾಗಬೇಕಾಗುತ್ತದೆ.
https://www.vijayavani.net/s-world-number1-richest-people/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − four =
Remember me
