ಬೆಂಗಳೂರು:‘ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಕಿಟಕಿ ಮೂಲಕ ಬಸ್​ ಹತ್ತುವಾಗ ಮಹಿಳೆಯೊಬ್ಬರ ಕೈ ಕತ್ತರಿಸಲ್ಪಟ್ಟಿದೆ’ ಎಂದು ಬಿಂಬಿಸಿರುವ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನರಸೀಪುರ–ನಂಜನಗೂಡು ಮುಖ್ಯ ರಸ್ತೆಯ ಬಸವನಪುರ ಬಳಿ ಕೆಎಸ್‌ಆರ್​ಟಿಸಿ ಬಸ್ ಹಾಗೂ ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರ ಕೈಗಳು ತುಂಡಾಗಿವೆ ಎಂದು ತಿಳಿಸಿದೆ.
ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಸೇತುವೆ ಬಳಿಕ ಕೆಸ್​ಆರ್​ಟಿಸಿ ಬಸ್ ಹಾಗೂ ಮಿನಿ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ, ಮೂವರು ಗಾಯಗೊಂಡಿದ್ದರು. ಈ ಮೂವರು ನಂಜನಗೂಡಿನಿಂದ ತಿ.ನರಸೀಪುರ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಮುಂದೆ ಕುಳಿತಿದ್ದರು. ಬಸ್ಸು ತಾಲೂಕಿನ ಬಸವನಪುರ ಗ್ರಾಮದ ಸೇತುವೆ ಬಳಿ ಬರುತ್ತಿದ್ದಂತೆ, ಎದುರಿನಿಂದ ಬಂದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗದಲ್ಲಿದ್ದ ರಾಜಮ್ಮ ಹಾಗೂ ಶಾಂತಕುಮಾರಿ ಎಂಬ ಮಹಿಳೆಯರ ಕೈ ಕತ್ತರಿಸಲ್ಪಟ್ಟಿದೆ.
ಇದನ್ನೂ ಓದಿ:ಹುಡುಗಿಯರ ನೆಚ್ಚಿನ ಸಿಐಡಿ ಇನ್ಸ್​ಪೆಕ್ಟರ್ ಇಂದು ಬೆಂಗಳೂರಿನಲ್ಲಿ ಪ್ರೊಫೆಸರ್!
ಶಕ್ತಿ ಯೋಜನೆ ಲಾಭ ಪಡೆದುಕೊಂಡಿರುವ ಮಹಿಳೆಯರು ರಾಜ್ಯಾದ್ಯಂತ ಸರ್ಕಾರಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ನಡುವೆ ಮಹಿಳೆಯಲ್ಲಿ ಬಸ್ಸಿನಲ್ಲಿ ವಾಗ್ವಾದ ನಡೆಸುತ್ತಿರುವುದು, ಕಿಟಿಕಿ ಮೂಲಕ ಬಸ್ ಹತ್ತುತ್ತಿರುವುದು, ಸೀಟಿಗಾಗಿ ಗಲಾಟೆ ಮಾಡುತ್ತಿರುವುದು ಇತ್ಯಾದಿ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಇದನ್ನೂ ಓದಿ:ಶಿವಮೊಗ್ಗ | ಮೆಡಿಕಲ್ ವಿದ್ಯಾರ್ಥಿಗಳ ಹೈಟೆಕ್ ದಂಧೆ! ಮನೆಯಲ್ಲೇ ಗಾಂಜಾ ಬೆಳೆಯುತ್ತಿದ್ದವರು ಅಂದರ್
ಉಚಿತ ಬಸ್ ವಿಚಾರದಲ್ಲಿ ಕೆಲವೆಡೆ ನಡೆದಿರುವ ಸಮಸ್ಯೆಗಳನ್ನೇ ಮುಂದಿಟ್ಟುಕೊಂಡು ಯೋಜನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗುತ್ತಿದೆ. ಶಕ್ತಿ ಯೋಜನೆಯಿಂದ ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ ಎಂಬ ಆರೋಪವೂ ಕೇಳಿ ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್ ನಲ್ಲಿ ಕಿಟಕಿ ಮೂಲಕ ಹತ್ತುವಾಗ ನಡೆದಿರುವ ಘಟನೆ ಎಂದು ಬಿಂಬಿಸಿ ಅಪಘಾತದ ವಿಡಿಯೋವನ್ನು ತಪ್ಪಾಗಿ ತೋರಿಸುತ್ತಿರುವ ಬಗ್ಗೆ ಸ್ಪಷ್ಟೀಕರಣ.pic.twitter.com/cFBdTPK8K0
ಇದೀಗ ಇದನ್ನೇ ಲಾಭ ಮಾಡಿಕೊಂಡಿರುವ ಕೆಲವು ಮಂದಿ ಅಪಘಾತದಿಂದ ಕೈ ಕತ್ತರಿಸಲ್ಪಟ್ಟ ಮಹಿಳೆ ನರಳಾಡುತ್ತಿರುವ ದೃಶ್ಯವನ್ನು ಸೆರೆಹಿಡಿದು, ‘ಕಿಟಕಿ ಮೂಲಕ ಬಸ್ ಹತ್ತಲು ಹೋಗಿ ಕೈ ಕತ್ತರಿಸಿಕೊಂಡ ಮಹಿಳೆ’ ಎಂಬರ್ಥದಲ್ಲಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಸದ್ಯ ಈ ಅಪಪ್ರಚಾರಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ಕೊಟ್ಟಿದ್ದು, ಗೊಂದಲ ಬಗೆ ಹರಿದಿದೆ.
ಗಾಯಾಳುಗಳನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ನಿಗಮವು ಭರಿಸುತ್ತಿದೆ. ಲಾರಿ ಚಾಲಕನ ವಿರುದ್ದ ಬಿಳಿಗೆರೆ ಪೋಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಈ ಅಪಘಾತದಲ್ಲಿ ಸಂಸ್ಥೆಯ ಚಾಲಕರ ತಪ್ಪಿರುವುದಿಲ್ಲ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಘಟನೆ ಇದಾಗಿರುವುದಿಲ್ಲ ಎಂದು ತಿಳಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:4 + twenty =
Remember me
