ಕಲಬುರಗಿ:ರಾಜ್ಯದಲ್ಲಿ ನಿನ್ನೆ ಹಾಗೂ ಇಂದು ಎರಡು ಭೀಕರ ಅಪಘಾತಗಳು ಸಂಭವಿಸಿದ್ದು, ಇದೀಗ ಇನ್ನೊಂದು ಅಪಘಾತ ಸಂಭವಿಸಿದೆ. ನಲವತ್ಮೂರು ಜನರಿದ್ದ ಬಸ್ಸೊಂದು ಇಂದು ಪಲ್ಟಿಯಾಗಿದೆ.
ನಿನ್ನೆ ಕೊಪ್ಪಳ ಬಳಿ ಲಾರಿ ಮತ್ತು ಇಂಡಿಕಾ ಕಾರು ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಆರೂ ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಇಂದು ಕೊಳ್ಳೇಗಾಲದ ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂರು ಕುಟುಂಬಗಳ ಒಟ್ಟು 9 ಮಂದಿ ಸಾವಿಗೀಡಾಗಿದ್ದರು.
ಇದನ್ನೂ ಓದಿ:ಭೀಕರ ಅಪಘಾತ: ಮೂರು ಕುಟುಂಬದ 9 ಮಂದಿ ಸಾವು, ಮೂವರ ಪರಿಸ್ಥಿತಿ ಗಂಭೀರ
ಇದೀಗ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕಿಣ್ಣಿ ಸಡಕ್ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿದೆ. ಬೀದರ್​ನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಈ ಬಸ್​ನಲ್ಲಿ 40ಕ್ಕೂ ಅಧಿಕ ಮಂದಿ ಇದ್ದರು. ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿದಲ್ಲ ಎನ್ನಲಾಗಿದೆ. ಲಾರಿಯೊಂದು ಏಕಾಏಕಿ ಎದುರಿಗೆ ಬಂದ ಪರಿಣಾಮ ಈ ಅಪಘಾತ ಸಂಭವಿಸಿದೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಯೊಳಕ್ಕೇ ಸಿಲುಕಿತು ಅರ್ಧ ಕಾರು, 6 ಮಂದಿ ಸ್ಥಳದಲ್ಲೇ ಸಾವು: ಭೀಕರತೆಗೆ ಎದೆ ನಲುಗಿತು ಎಂದ ಸಿಎಂ, ಪರಿಹಾರ ಘೋಷಣೆ

ನಿಮ್ಮ ದಾಖಲೆ ಬಳಸಿ ಬೇರೆಯವರು ಸಿಮ್ ಖರೀದಿಸಿದ್ದರೆ ತಿಳಿಯುವುದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 6 =
Remember me
