ಆನೇಕಲ್​:ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್​ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್​ ಸವಾರರಿಬ್ಬರು ಮೃತಪಟ್ಟಿದ್ದಾರೆ. ಬೈಕ್​ನಲ್ಲಿ ಪೆಟ್ರೋಲ್​ ಸೋರಿಕೆಯಾಗಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಬಸ್​ಗೂ ವ್ಯಾಪಿಸಿದ್ದು, ಅದೃಷ್ಟವಶಾತ್​ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಇಂತಹ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸಿಕ್ಕಿರಿ ಮೇಡು ಬಳಿಯ ಹೊಸ ವೈದ್ಯಕೀಯ ಕಾಲೇಜು ಸಮೀಪ ಭಾನುವಾರ ಸಂಭವಿಸಿದೆ. ಹೊಸೂರು ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಡಿಕ್ಕಿಯ ರಭಸಕ್ಕೆ ಪಲ್ಸರ್ ಬೈಕ್​ನ ಟ್ಯಾಂಕರ್​ನಿಂದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಬಸ್​ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಬಸ್ಸಿಗೂ ಬೆಂಕಿ ವ್ಯಾಪಿಸುತ್ತಿದ್ದಂತೆ ಪ್ರಯಾಣಿಕರನ್ನು ಕೂಡಲೇ ಚಾಲಕ ಹಾಗೂ ನಿರ್ವಾಹಕರು ಕೆಳಗೆ ಇಳಿಸಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು, ಕುರುಬರಬಲ್ಲಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೈಕ್​ ಸವಾರರಿಬ್ಬರ ಮೃತದೇಹ ರಸ್ತೆಯಲ್ಲಿ ನಜ್ಜುಗುಜ್ಜಾಗಿ ಬಿದ್ದಿತ್ತು. ಅಪಘಾತದ ಭೀಕರತೆ ಕಂಡು ಜನರು ಬೆಚ್ಚಿಬಿದ್ದರು. ಮೃತರಿಬ್ಬರೂ ಕುರುಬರಪಲ್ಲಿ ಮೂಲದವರು ಎನ್ನಲಾಗಿದೆ.
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಸ್ಯಾಂಟ್ರೋ ರವಿ ‘ಪಿಂಪ್’ ಮಾತ್ರವಲ್ಲ… ಬಗೆದಷ್ಟೂ ಬಯಲಾಗ್ತಿದೆ ಈತನ ಕರಾಳ ಮುಖ…

ಬಿಜೆಪಿಯತ್ತ ಮಾಗಡಿ ಶಾಸಕ ಮಂಜು​ನಾಥ್​? ಯೋಗೇಶ್ವರ್​ ಜತೆ ಮಾತುಕತೆ ನಡೆಸಿದ್ರು… ಎನ್ನುತ್ತಲೇ ಹೊಸ ಬಾಂಬ್​ ಸಿಡಿಸಿದ ಬಾಲಕೃಷ್ಣ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:9 − two =
Remember me
