ಬೆಂಗಳೂರು:ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Bengaluru-Mysuru National Highway) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಎಲೆಕ್ಟ್ರಿಕ್ ಬಸ್‌ ಅಪಘಾತಕ್ಕೀಡಾಗಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಕೃಷಿ ಹೊಂಡದೊಳಗೆ ಗಾಂಜಾ ಗಿಡ; 20 ಕೆ.ಜಿ ತೂಕವುಳ್ಳ 25 ಗಿಡಗಳ ಜತೆ ಆರೋಪಿ ಅರೆಸ್ಟ್
ಮಡಿಕೇರಿಯಿಂದ ರಾಮನಗರ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್​​​ಆರ್​​ಟಿಸಿ ಬಸ್ ಮುಂದೆ ಪ್ಲೈವುಡ್ ಶೀಟ್​​ಗಳನ್ನು ಹೊತ್ತು ಹೋಗುತ್ತಿದ್ದ ಪಿಕಪ್​ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಶೀಟ್​​ಗಳು ರಸ್ತೆಗೆ ಉರುಳಿದೆ!​​ ಕೂಡಲೇ ಬಸ್​​ ಚಾಲಕ ಅದನ್ನು ತಪ್ಪಿಸಲು ಹೋಗಿ ರಸ್ತೆಯ ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ 51 ವರ್ಷದ ಬಸ್​ ಚಾಲಕ ರಮೇಶ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿಲ್ಲವೆಂಬ ಕಾರಣಕ್ಕೆ ಹತ್ಯೆ
ಬಸ್​​ನಲ್ಲಿದ್ದ 22 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ರಾಮನಗರ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಕೆಲವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಸಂಸ್ಥೆ ಮಾಹಿತಿ ನೀಡಿದೆ. “ಬಸ್​​ ಮುಂದೆ ಸಾಗುತ್ತಿದ್ದ ಬೊಲೆರೊ ಪಿಕಪ್ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಅದರಲ್ಲಿದ್ದ ಪ್ಲೈವುಡ್ ಶೀಟ್‌ಗಳು ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್ ಬಸ್​​ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಮತ್ತು ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
