ಬೆಂಗಳೂರು:ವಿದ್ಯಾರ್ಥಿಗಳು ಸಾರಿಗೆ ಬಸ್​ಗಾಗಿ ಕಾಯುತ್ತಿದ್ದರೂ ಬಸ್​ ನಿಲ್ಲಿಸದೆ ಕೆಲ ಚಾಲಕರು​ ಮತ್ತು ನಿರ್ವಾಹಕರು ಉದ್ಧಟತನ ತೋರುತ್ತಿದ್ದು, ಬಸ್​ಪಾಸ್​ವುಳ್ಳ ಮಕ್ಕಳಾದಿಯಾಗಿ ಬಹುತೇಕರು ನಿತ್ಯ ಸಮಸ್ಯೆ ಅನುಭವಿಸುತ್ತಲೇ ಇದ್ದಾರೆ. ಈ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ಆಗಾಗ್ಗೆ ಪ್ರತಿಭಟನೆ ನಡೆಸಿರುವ ಪ್ರಕರಣಗಳು ಸಾಕಷ್ಟಿದೆ. ಆದರೂ ಕೆಲವೆಡೆ ಈ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ. ಇದನ್ನು ಇತ್ತೀಚಿಗೆ ಸ್ವತಃ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರೇ ಖುದ್ದಾಗಿ ಕಂಡಿದ್ದು, ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೆ ಮುಂದೆ ಸಾಗಿದ ಬಸ್​ ಅನ್ನು ಅಡ್ಡಗಟ್ಟಿ ಚಾಲಕ ಮತ್ತು ನಿರ್ವಾಹಕರಿಗೆ ನಡುರಸ್ತೆಯಲ್ಲೇ ಕ್ಲಾಸ್​ ತೆಗೆದುಕೊಂಡಿದ್ದರು.
ಇದೀಗ ಈ ಘಟನೆ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ಬರೆದಿರುವ ಸುರೇಶ್​ ಕುಮಾರ್​, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೊರಟು ನಿಂತಾಗ ರಾಜ್ಯದ ವಿವಿಧೆಡೆಯ ಗ್ರಾಮಾಂತರ ಪ್ರದೇಶಗಳ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್​ ನಿಲ್ಲಿಸದೆ ಕೆಎಸ್​ಆರ್​ಟಿಸಿ ಬಸ್​ಗಳ ಕೆಲ ಚಾಲಕರು /ನಿರ್ವಾಹಕರು ವಿದ್ಯಾರ್ಥಿಗಳ ಕುರಿತು ಅವಜ್ಞೆ ತೋರುತ್ತಿದ್ದಾರೆ. ನಾನು ಕಳೆದ ಶನಿವಾರ ತುಮಕೂರು ಜಿಲ್ಲೆಯ ಪ್ರವಾಸದಲ್ಲಿರುವಾಗ ಪಿನಗಾನಹಳ್ಳಿ ಮಾರ್ಗದ ಬಸ್​ವೊಂದು ಕಡ್ಡಾಯ ನಿಲುಗಡೆ ಸ್ಥಳದಲ್ಲೂ ನಿಲ್ಲಿಸದೆ ಮುಂದೆ ಸಾಗಿತು. ಇದರಿಂದ ಅಲ್ಲೇ ಕಾಯುತ್ತಿದ್ದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದು ನನ್ನ ಗಮನಕ್ಕೆ ಬಂತು. ಆ ಬಸ್ ಚಾಲಕ/ನಿರ್ವಾಹಕರಿಗೆ ಬಸ್ ನಿಲ್ಲಿಸದಿದ್ದರೆ ಮಕ್ಕಳಿಗೆ ಆಗುವ ತೊಂದರೆ ಕುರಿತು ಮನದಟ್ಟು ಮಾಡಿದೆ’ ಎಂದು ವಿವರಿಸಿದ್ದಾರೆ.ಇದನ್ನೂ ಓದಿರಿರಾಮನಗರ ಎಸಿಯಿಂದ ನನಗೆ ಬರೋಬ್ಬರಿ 3 ಕೋಟಿ ರೂ. ಆಫರ್​ ಬಂದಿತ್ತು… ಗಂಭೀರ ಆರೋಪ ಮಾಡಿದ ಎಚ್​ಡಿಕೆ
‘ವಿದ್ಯಾರ್ಥಿಗಳನ್ನು ಬಸ್ ಚಾಲಕ/ನಿರ್ವಾಹಕರು ಅವಜ್ಞೆ ಮಾಡದೆ ಮತ್ತು ಮಕ್ಕಳು ಶಾಲಾ-ಕಾಲೇಜಿಗೆ ಹೋಗಿ ಬರಲು ತೊಂದರೆಯಾಗದಂತೆ ಸಹಾನುಭೂತಿಯಿಂದ ವರ್ತಿಸುವಂತೆ ಚಾಲಕ/ನಿರ್ವಾಹಕರಿಗೆ ನಿರ್ದೇಶನ ನೀಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿಗೆ ಲಕ್ಷ್ಮಣ ಸವದಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋದ ಚಾಲಕ, ಬಸ್​ ಅಡ್ಡಗಟ್ಟಿ ರಸ್ತೆಯಲ್ಲೇ ಶಿಕ್ಷಣ ಸಚಿವರಿಂದ ಸಿಬ್ಬಂದಿಗೆ ಹಿಗ್ಗಾಮುಗ್ಗಾ ತರಾಟೆ!

ಲೈವ್​ನಲ್ಲೇ ವಿಷ ಕುಡಿದ ಅರ್ಚಕ! 3 ದಿನದ ಬಳಿಕ ಸೆಲ್ಫಿವಿಡಿಯೋ ವೈರಲ್​, ಡೆತ್​ನೋಟ್​ನಲ್ಲಿದೆ ಸ್ಫೋಟಕ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
