ತುಮಕೂರು:ಕಡ್ಡಾಯ ಬಸ್‌ ನಿಲುಗಡೆ ಸ್ಥಳದಲ್ಲಿ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ ತೆರಳುತ್ತಿದ್ದ ಸರ್ಕಾರಿ ಬಸ್ಸನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವರು ಚಾಲಕನಿಗೆ ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡ ಘಟನೆ ಶನಿವಾರ ಜರುಗಿದೆ.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐ.ಕೆ.ಕಾಲನಿಯ ರಾಜ್ಯ ಹೆದ್ದಾರಿಯಲ್ಲಿಯೇ ಬಸ್​ ಅನ್ನು ಅಡ್ಡಗಟ್ಟಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳನ್ನು ಬಿಟ್ಟು ಹೋದ ಚಾಲಕ ಮತ್ತು ನಿರ್ವಾಹಕರಿಗೆ ರಸ್ತೆಯಲ್ಲಿ ನಿಲ್ಲಿಸಿಕೊಂಡು ಕ್ಲಾಸ್​ ತೆಗೆದುಕೊಂಡರು.ಇದನ್ನೂ ಓದಿರಿಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ ಗುಂಡಿನ ದಾಳಿ! ಬೆಚ್ಚಿಬಿದ್ದ ಕುಟುಂಬಸ್ಥರು
ಸಚಿವ ಸುರೇಶ್‌ ಕುಮಾರ್ ಅವರು ಬೆಂಗಳೂರಿನಿಂದ ದಾಬಸ್​ಪೇಟೆ-ಕೊರಟಗೆರೆ ಮಾರ್ಗವಾಗಿ ಮಧುಗಿರಿಯ ದೂರ ತರಂಗ ಶಿಕ್ಷಣ ಅಭಿಯಾನ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್​ ಚಾಲಕ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೆ ಹೋಗಿರುವುದು ಸಚಿವರ ಗಮನಕ್ಕೆ ಬಂದಿದೆ. ಇದನ್ನು ಗಮನಿಸಿದ ಶಿಕ್ಷಣ ಸಚಿವರು ಬಸ್‌ ಅನ್ನು ತಡೆದು ತರಾಟೆಗೆ ತೆಗೆದುಕೊಂಡರು. ಇನ್ಮುಂದೆ ಆ ಸ್ಥಳದಲ್ಲಿ ಬಸ್​ ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡೇ ಹೋಗಬೇಕು ಎಂದು ಚಾಲಕನಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ

ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
