ಕುಣಿಗಲ್:ಕೆಎಸ್​ಆರ್​ಟಿಸಿ ಬಸ್​ನ ಹಿಂಬದಿ ಟೈರ್ ಸ್ಪೋಟಗೊಂಡು ಇಬ್ಬರು ವ್ಯಕ್ತಿಗಳು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಹುತ್ರಿದುರ್ಗ ವ್ಯಾಪ್ತಿಯ ಶಿವಪುರ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ. ಗಾಯಾಳುಗಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆದಿ ಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಾವರೆಕೆರೆಯಿಂದ ಇಪ್ಪಾಡಿ ಮಾರ್ಗವಾಗಿ ಕುಣಿಗಲ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​ನ ಟೈರ್ ಸ್ಫೋಟಗೊಂಡು ಶಿವಪುರ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಹಿಂಬದಿ ಚಕ್ರದ ಮೇಲ್ಭಾಗದ ಸೀಟ್​ನಲ್ಲಿ ಕುಳಿತಿದ್ದ ಇಬ್ಬರು ಪ್ರಯಾಣಿಕರ ಕಾಲು ಮುರಿದಿದೆ.
ಇದನ್ನೂ ಓದಿ:ಕಾಂಗ್ರೆಸ್-ಬಿಜೆಪಿ ನಾಯಕರ ಹೊಂದಾಣಿಕೆ! ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ
ಬಸ್​ನ ಟೈರ್ ಹಳೆಯದಾಗಿದ್ದು ಹಾಗೂ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಹತ್ತಿಸಿಕೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಬಸ್ಸಿನಲ್ಲಿ ಶಾಲೆ-ಕಾಲೇಜಿಗೆ ತೆರಳುತ್ತಿದ್ದ ಸಾಕಷ್ಟು ವಿದ್ಯಾರ್ಥಿಗಳಿದ್ದರು. ಅದೃಷ್ಟವಶಾತ್ ಭಾರೀ ಅವಗಢ ತಪ್ಪಿದೆ.
ಕುಣಿಗಲ್​ನಿಂದ ಇಪ್ಪಾಡಿ ಮಾರ್ಗವಾಗಿ ತಾವರೆಕೆರೆ ಗ್ರಾಮಕ್ಕೆ ತೆರಳುತ್ತಿದ್ದ ಬಸ್​ಗಳಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ ಒಂದೇ ಬಸ್ಸಿನಲ್ಲಿ ಮಿತಿಮೀರಿದ ಸಂಖ್ಯೆಯಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಬಂದೊದಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
