ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಗೋವಾ ರಾಜ್ಯಕ್ಕೆ ಸಾರಿಗೆ ಕಾರ್ಯಾಚರಣೆಯನ್ನು ಜು.6ರಿಂದ ಪುನರಾರಂಭಗೊಳಿಸಲಿದ್ದು, ಪ್ರಯಾಣಿಸುವವರು ಕೋವಿಡ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ಸೂಚನೆ ನೀಡಿದೆ.
ನಿಗಮದ ಬಸ್ಸುಗಳಲ್ಲಿ ಕರ್ನಾಟಕದಿಂದ ಗೋವಾ ರಾಜ್ಯಕ್ಕೆ ಪ್ರಯಾಣಿಸುವವರು, 72 ಗಂಟೆಗಳ ಒಳಗೆ ಮಾಡಿಸಿರುವ ಕೋವಿಡ್ ನೆಗಟಿವ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಪ್ರಯಾಣಿಕರು ವರದಿಯನ್ನು ಹೊಂದಿರುವ ಬಗ್ಗೆ ಆಯಾ ಬಸ್‌ನ ನಿರ್ವಾಹಕರು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳಬೇಕು. ಈ ಕುರಿತು ಚಲನಾ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡಲಾಗುವುದು.
ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಸಾರಿಗೆಗಳನ್ನು ಕಾರ್ಯಚರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೈಗೊಂಡ ಕ್ರಮದ ಬಗ್ಗೆ ಹಾಗೂ ಪುನರಾಂಭಿಸಿದ ಸಾರಿಗೆಗಳ ವಿವರಗಳನ್ನು ಕಚೇರಿಗೆ ತ್ವರಿತವಾಗಿ ಕಳುಹಿಸಿಕೊಡಬೇಕೆಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆ.
ಹೆತ್ತವಳಿಗೇ ಚಪ್ಪಲಿಯಲ್ಲಿ ಬಾರಿಸಿದ ಮಗ! ವಿಡಿಯೋ ವೈರಲ್ ಆದ ಬೆನ್ನಲ್ಲೇ ಮನೆ ಬಾಗಿಲಿಗೆ ಬಂದರು ಪೊಲೀಸರು

ಕಿರಣ್​ಗೆ ಡಿವೋರ್ಸ್ ನೀಡಿದ ಅಮೀರ್​ಗೆ ಫಾತೀಮಾ 3ನೇ ಹೆಂಡತಿ!? ಟ್ರೆಂಡಿಂಗ್​ನಲ್ಲಿ ದಂಗಲ್ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + two =
Remember me
