ಬೆಂಗಳೂರು:ವಿಧಾನಸಭಾ ಚುನಾವಣೆಗೆ ಸಕಲ ರೀತಿಯಲ್ಲೂ ಸಿದ್ಧತೆ ನಡೆಯುತ್ತಿವೆ. ಇದೀಗ ಕೆಎಸ್​​ಆರ್​ಟಿಸಿ ಬಸ್​ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವುದರಿಂದ ಪ್ರಯಾಣಿಕರು ಪರದಾಡ ನಡೆಸುತ್ತಿರುವ ಪರಿಸ್ಥಿತಿ ಮೆಜೆಸ್ಟಿಕ್ ಬಸ್ ನಿಲ್ದಾಣ ಸೇರಿದಂತೆ ರಾಜ್ಯ ವಿವಿಧ ಬಸ್​ ನಿಲ್ದಾಣಗಳಲ್ಲಿ ಕಂಡು ಬಂದಿದೆ.
ಇದನ್ನೂ ಓದಿ:VIDEO | ಹುಬ್ಬಳ್ಳಿಯಲ್ಲಿ ಹನುಮಾನ್ ಚಾಲೀಸಾ ಪಠಿಸಿದ ಸಿಎಂ ಬೊಮ್ಮಾಯಿ; ಬೆಂಬಲಿಗರಿಂದ ಸಾಥ್
ಚುನಾವಣಾ ಕರ್ತವ್ಯಕ್ಕೆ 3500 ಕೆಎಸ್​​ಆರ್​ಟಿಸಿ ಬಸ್​ಗಳು ತೆರಳಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಸಮಸ್ಯೆ ಎದುರಾಗಿದೆ. ಮೆಜೆಸ್ಟಿಕ್​ಗೆ ಬರುತ್ತಿರುವ ಸೀಮಿತ ಬಸ್​ಗಳು ಕೂಡ ಪ್ರಯಾಣಿಕರಿಂದ ತುಂಬಿ ತುಳುಕುತ್ತಿವೆ. ದೂರ ಊರಿಗೂ ನಿಂತುಕೊಂಡೇ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಚುನಾವಣೆಯ ಕಾರಣದಿಂದ ಕೆಲ ಪ್ರಯಾಣಿಕರು ತಮ್ಮ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸಿಕೊಂಡಿದ್ದಾರೆ. ಆದರೆ ಬಹುತೇಕ ಸಾಮಾನ್ಯ ಪ್ರಯಾಣಿಕರು ಬಸ್ಸಿಲ್ಲದೆ, ಅತ್ತ ಮತ ಚಲಾವಣೆಗೆ ತೆರಳಲು ಸಮಸ್ಯೆ ಅನುಭವಿಸುವಂತಾಗಿದೆ.
ಇದನ್ನೂ ಓದಿ:‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆಗೆ ಅವಕಾಶವಿಲ್ಲ; ಶಾಂತಿ ಕಾಪಾಡಲು ಈ ನಿರ್ಧಾರ ಎಂದ ಪ.ಬಂ ಸಿಎಂ
ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಭಾಗಗಳಿಗೆ ತೆರಳುವ ಬಸ್​ಗಳಿಗೆ ಹೆಚ್ಚಿನ ಬೇಡಿಕೆ ಸೃಷ್ಟಿಯಾಗುತ್ತಿದು, ಸೀಮಿತ ಬಸ್​ಗಳಲ್ಲಿ ಪ್ರಯಾಣಿಕರು ನಿಂತುಕೊಂಡು ಹೋಗಬೇಕಾಗದ ಪರಿಸ್ಥಿತಿ ಉಂಟಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − three =
Remember me
