
ಬೆಂಗಳೂರು:ಕೇಂದ್ರ ಸರ್ಕಾರ ಲಾಕ್​ಡೌನ್​ ನಾಲ್ಕನೇ ಹಂತದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ನಾಳೆ (ಮೇ 17) ಬೆಳಗ್ಗೆ 11ಗಂಟೆಗೆ ಸಚಿವರ ಸಭೆ ಕರೆದಿದ್ದಾರೆ. ನಾಳೆ ಸಾರಿಗೆ ಮತ್ತು ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ.
ಇದನ್ನೂ ಓದಿ:ಲಾಕ್​ಡೌನ್​ 4.0: ಹೊಸ ಮಾರ್ಗಸೂಚಿ ಅನ್ವಯ ದೇಶದಲ್ಲಿ ಈ ಎಲ್ಲವೂ ಬಂದ್​…
ಕೇಂದ್ರ ಸರ್ಕಾರ ಬಸ್​, ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಸಂಚರಿಸಲು ಅವಕಾಶ ಕೊಡಬೇಕೋ ಬೇಡವೋ ಎಂಬುದನ್ನು ನಿರ್ಧರಿಸುವ ಹೊಣೆಯನ್ನು ರಾಜ್ಯ ಸರ್ಕಾರಗಳಿಗೇ ಬಿಟ್ಟಿದೆ. ಈ ಬಗ್ಗೆ ನಾಳಿನ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎನ್ನಲಾಗಿದೆ.
ಇನ್ನು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ್​ ಸವದಿಯವರೂ ಕೂಡ ರಾಜ್ಯದಲ್ಲಿ ಸಾರಿಗೆ ಬಸ್​ಗಳ ಸಂಚಾರ ಮರು ಆರಂಭದ ಬಗ್ಗೆ ನಾಳೆ ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕೇಂದ್ರದಿಂದ ಪ್ರಕಟವಾಗಿಲ್ಲ ಹೊಸ ಮಾರ್ಗಸೂಚಿ; ರಾಜ್ಯದಲ್ಲಿ ಮೇ 19ರವರೆಗೂ ಲಾಕ್​ಡೌನ್ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
