ಬಾಗಲಕೋಟೆ:ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಚಾಲಕ ಕಮ್​ ನಿರ್ವಾಹಕರಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನಲ್ಲಿ ನಡೆದಿದೆ.
ಮೃತರನ್ನು ಶ್ರೀಶೈಲ ವಿಭೂತಿ (45) ಎಂದು ಗುರುತಿಸಲಾಗಿದ್ದು, ಬೀಳಗಿಯ ತಮ್ಮ ಮನೆಯಲ್ಲಿ ಶನಿವಾರ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೀಳಗಿ ಕೆಎಸ್​ಆರ್​ಟಿಸಿ ಬಸ್ ಡಿಪೋ ಮ್ಯಾನೇಜರ್​​​​​​​ ಮತ್ತು ಜಿಲ್ಲಾ ಕಂಟ್ರೋಲರ್​ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಹಿಂದೆ ಅಂದರೆ 2022ರಲ್ಲಿ ಮೇಲಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದ ಶ್ರೀಶೈಲ ಅವರು ಮಾತನಾಡಿದ್ದ ಹಳೆಯ ವಿಡಿಯೋ ಈಗ ಬಹಿರಂಗವಾಗಿದ್ದು, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿ ಬರುತ್ತಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೀಳಗಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eight + 14 =
Remember me
