ಬೆಂಗಳೂರು:ತಮ್ಮನ್ನು ಸರ್ಕಾರಿ ನೌಕರರನ್ನಾಗಿಸಿ ಪರಿಗಣಿಸಲು ಮತ್ತು ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಕರೆ ನೀಡಿದ್ದ ಸಾರಿಗೆ ನೌಕರರ ಮುಷ್ಕರ ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ಅಷ್ಟಾಗಿ ಪರಿಣಾಮ ಬೀರಲಿಲ್ಲ.
ಶಾಲಾ‌ ಕಾಲೇಜು, ಕೆಲಸಕ್ಕೆ ತೆರಳಬೇಕಾದವರಿಗೆ ಯಾವುದೇ ತೊಂದರೆ ಇಲ್ಲ. ಸಹಜವಾಗಿ ಎಂದಿನಂತೆ ಆರಂಭವಾಗಿರುವ ಜಿಲ್ಲೆಗಳಲ್ಲಿ ಬಸ್ ಸಂಚಾರ ಆರಂಭವಾಗಿದೆ. ಹಲವು ಜಿಲ್ಲೆಗಳಿಂದ ಬೆಂಗಳೂರಿಗೆ ಬೆಳಗ್ಗೆ ಬಸ್​ಗಳು ಆಗಮಿಸಿದವು.
ಸಾರಿಗೆ ಇಲಾಖೆ ಸಿಬ್ಬಂದಿಗೆ ನೋಟಿಸ್​ ನೀಡಿದ್ದು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದೆ. ವಾರದ ರಜೆ ಪಡೆದವರು, ಅಥವಾ ಮೊದಲೇ ಅನುಮತಿ ಪಡೆದು ರಜೆ ಪಡೆದಿದ್ದವರು ಮಾತ್ರ ಬೆಂಗಳೂರಿಗೆ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಗದಗ, ಬೀದರ್​ ಜಿಲ್ಲೆಗಳಿಂದ ಪ್ರತಿಭಟನೆಗೆ ನಿರ್ವಾಹಕರು ಮತ್ತು ಚಾಲಕರು ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದಾರೆ. ಇನ್ನು ಶಿರಸಿ ವಿಭಾಗದಿಂದ 200ಕ್ಕೂ ಹೆಚ್ಚು ಸಾರಿಗೆ ನೌಕರರು ಬೆಂಗಳೂರು ತಲುಪಿದ್ದಾರೆ.
ವಾರದ ರಜೆ ಪಡೆದವರು ಮಾತ್ರ ಬೆಂಗಳೂರಿಗೆ ಹೋಗಬಹುದು. ಗ್ರಾಮೀಣ ಭಾಗ ಸೇರಿದಂತೆ ಜಿಲ್ಲೆಯಲ್ಲಿ ಬಸ್ ಸಂಚಾರ ಎಂದಿನಂತೆ ನಡೆದಿದೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹಾಸನ ಮೇನೇಜರ್ ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
ಈ ಜಿಲ್ಲೆಗಳಲ್ಲಿ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ದೊರೆತಿಲ್ಲ. ಯಾವುದೇ ಬಸ್ ಸಂಚಾರ ಬಂದ್ ಇಲ್ಲದ ಹಾಗೆ ಕಾರ್ಯ ನಿರ್ವಹಿಸುತ್ತಿವೆ.
ಬಾಗಲಕೋಟೆ, ಬಳ್ಳಾರಿ, ಗದಗ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉತ್ತರಕನ್ನಡ, ಬೀದರ್​, ಕೊಡಗು, ರಾಯಚೂರು, ಹಾಸನ, ಮಂಡ್ಯ, ರಾಮನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಬಸ್​ ಸಂಚಾರ ಆರಂಭವಾಗಿದೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
