ಬೆಂಗಳೂರು:ಇಂದಿನಿಂದ ಕರ್ನಾಟಕದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮ ಕೈಗೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆಯನ್ನು ಹೊರಡಿಸಿದೆ.
ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಕೆಎಸ್​ಆರ್​​ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಕೆಎಸ್​ಆರ್​​ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸ್​​ ಅಥವಾ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು ಎಂದು ಕೆಎಸ್​ಆರ್​​ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಕರ್ನಾಟಕ ರಾಜ್ಯ ರ್ಸತೆ ಸಾರಿಗೆ ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ ರಿಯಾಯಿತಿ ಬಸ್​​ ಪಾಸುಗಳನ್ನು ಇಡಿಸಿಎಸ್​​​ ಎಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಿಲಾಗುತ್ತಿದ್ದು, ಇಡಿಸಿಎಸ್​​ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಆನ್​ಲೈನ್​​ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಿರುತ್ತದೆ. ಜತೆಗೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕೆ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಿರುತ್ತದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕರಿಂದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
VIDEO| ಉರ್ಫಿ ಜಾವೇದ್​​ ತೊಟ್ಟ ಬಟ್ಟೆಯನ್ನು ಮೊದಲ ಬಾರಿಗೆ ಮೆಚ್ಚಿದ ನೆಟ್ಟಿಗರು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seven + 11 =
Remember me
