ಬೆಳಗಾವಿ:ಬ್ರೇಕ್​ ಫೇಲ್​ ಆಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಜಹಂಸ ಬಸ್​ ಪಲ್ಟಿಯಾಗಿ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ತಿಮ್ಮಾಪುರ ಬಳಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುತ್ತಿದ್ದ ರಾಜಹಂಸ ಬಸ್​ ತಿಮ್ಮಾಪುರ ಬಳಿ ಏಕಾಏಕಿ ಬ್ರೇಕ್ ಫೇಲ್​ ಆಗಿದೆ. ಪರಿಣಾಮ ರಸ್ತೆ ಪಕ್ಕದಲ್ಲಿದ್ದ ಬ್ಯಾರಿಕೇಡ್​​ಗೆ ಡಿಕ್ಕಿಯಾಗಿ ಬಳಿಕ ಪಲ್ಟಿಯಾಗಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ. ಬಸ್​ ಒಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹಿಂದಿನ ಗಾಜು ಒಡೆದು ಹೊರಕ್ಕೆ ಕರೆತರಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬ್ರೇಕ್​​ಫೇಲ್​ ಆಗಿರುವುದರಿಂದ ಈ ಅವಘಢ ಸಂಭವಿಸಿದ್ದು, ಕಿತ್ತೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 20 =
Remember me
