ತುಮಕೂರು:ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡಿದ್ದನ್ನು ಗಮನಿಸಿದ ಕೆಎಸ್​ಆರ್​ಟಿಸಿ ಚಾಲಕ ಹಾಗೂ ನಿರ್ವಾಹಕ ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮರೆದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರಿನಲ್ಲಿ ನಡೆದಿದೆ.
ಶಿವಮೊಗ್ಗದಿಂದ ಬೆಂಗಳೂರಿನತ್ತ ಬಸ್​ನಲ್ಲಿ ಘಟನೆ ನಡೆದಿದ್ದು, ಅಸ್ವಸ್ಥಗೊಂಡವರನ್ನು ಭದ್ರಾವತಿ ಮೂಲದ ಈಶ್ವರ್​ ರೆಡ್ಡಿ ಎಂದು ಗುರುತಿಸಲಾಗಿದೆ. ಬಸ್​ ಚಾಲಕ ಪ್ರಕಾಶ್​ ಹಾಗೂ ನಿರ್ವಾಹಕ ಓಂಕಾರ್​ ಅವರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ:VIDEO| ಧಾರ್ಮಿಕ ಸೌಹಾರ್ದತೆಗೆ ಧಕ್ಕೆ; ಆರೋಪಿಗಳ ಮನೆ ಮೇಲೆ ಜೆಸಿಬಿ ಕಾರ್ಯಾಚರಣೆ
ಶಿವಮೊಗ್ಗದಿಂದ ಬೆಂಗಳೂರಿನತ್ತ ಬರುತ್ತಿದ್ದ ಬಸ್​ ತಿಪಟೂರು ತಲುಪಿದ ವೇಳೆ ಈಶ್ವರ್​ ರೆಡ್ಡಿ ಕುಸಿದು ಬಿದ್ದಿದ್ದು ಏಕಾಏಕಿ ಅವರ ಬಾಯಿಂದ ನೊರೆ ಹಾಗೂ ನಾಲಗೆಯಿಂದ ರಕ್ತಬರಲು ಶುರುವಾಗಿದೆ. ಇದನ್ನು ಗಮನಿಸಿದ ನಿರ್ವಾಹಕ ಓಂಕಾರ್​ ಕೂಡಲೇ ಬಸ್​ಅನ್ನು ಸರ್ಕಾರಿ ಆಸ್ಪತ್ರೆಯತ್ತ ತಿರುಗಿಸುವಂತೆ ಚಾಲಕ ಪ್ರಕಾಶ್​ಗೆ ಸೂಚಿಸಿದ್ದಾರೆ.
ಸಮಯಕ್ಕೆ ಸರಿಯಾಗಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಅವರ ಜೀವ ಉಳಿಸಿದ ಕೆಎಸ್​​ಆರ್​ಟಿಸಿ ಸಿಬ್ಬಂದಿ ಸಮಯಪ್ರಜ್ಞೆ ಹಾಗು ಮನುಷ್ಯತ್ವ ಗುಣಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + six =
Remember me
