ಚೆನ್ನೈ:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಿಗೆ KSRTC ಹೆಸರು ಬಳಕೆ ಮಾಡುತ್ತಿರುವುದನ್ನು ಪ್ರಶ್ನಿಸಿ ಕೇರಳ RTC ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್​ ಹೈಕೋರ್ಟ್​ ವಜಾಗೊಳಿಸಿದ್ದು, ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ(IPAB) ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಸ್ಥೆಯು 42 ವರ್ಷಗಳಿಂದ KSRTC ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿರುತ್ತದೆ. ಆದ್ದರಿಂದ KSRTCಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು KSRTC ವಾದ ಮಂಡಿಸಿದೆ.
ಕರ್ನಾಟಕ ಪಡೆದಿರುವ KSRTC ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೇರಳ RTC ವಾದಿಸಿತ್ತು. KSRTC, ಕೇರಳ RTC ವಾದ ಆಲಿಸಿದ ಮದ್ರಾಸ್​ ಹೈಕೋರ್ಟ್ ​ಕೇರಳ ಸಾರಿಗೆ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಭರ್ಜರಿ ಜಯ ಸಿಕ್ಕಿದರೆ, ಕೇರಳಕ್ಕೆ ಮುಖಭಂಗವಾಗಿದೆ.
ಇದನ್ನೂ ಓದಿ:ಲೋಕಸಭೆ ಕಲಾಪ ವೇಳೆ ಭದ್ರತಾ ಲೋಪ; ನನ್ನ ಮಗನ ಬ್ರೈನ್​ವಾಶ್​ ಮಾಡಲಾಗಿದೆ ಎಂದ ಆರೋಪಿ ಸಾಗರ್ ಶರ್ಮಾ ತಂದೆ
ಕೇರಳ KRTC ಕೂಡ 2019 ರಲ್ಲಿ KSRTCಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿಯನ್ನು ಪಡೆದುಕೊಂಡಿದೆ. ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್ಗೆ ವರ್ಗಾಯಿಸಲಾಯಿತು.
ಈ ಪ್ರಕರಣವು ದಿನಾಂಕ 12, 2023 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ RTC ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ .ಕೇರಳ KRTC ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆ ಎಸ್ ಆರ್ ಟಿ ಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ “ಕೆಎಸ್ಆರ್ ಟಿ ಸಿ” ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್ ಟಿ ಸಿ’ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013 ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣಪತ್ರಗಳನ್ನು ಸಂಸ್ಥೆಯು ದಿನಾಂಕ 1.11.1973 ಯಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿರುತ್ತದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್, ರವರಿಂದ ‘KSRTC’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್ ನ್ನು ಸಹ ಪಡೆಯಲಾಗಿರುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 9 =
Remember me
