ಶಿವಮೊಗ್ಗ:ಕುಟುಂಬ ಕದನಕ್ಕೆ ಸಾಕ್ಷಿಯಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಗೆದ್ದು ಬೀಗಿದ್ದು, ಎದುರಾಳಿ ಕಾಂಗ್ರೆಸ್​ನ ಗೀತಾ ಶಿವರಾಜ್​ಕುಮಾರ್​ ಹಾಗೂ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪಗೆ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಮಾಜಿ ಸಿಎಂ ದಿ. ಬಂಗಾರಪ್ಪ ಅವರ ಕುಟುಂಬದ ಕಲಹ ಚುನಾವಣೆ ಮುಗಿದರೂ ನಿಲ್ಲುವಂತೆ ಕಾಣುತ್ತಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಮಾಜಿ ಶಾಸಕ ಕುಮಾರ್​ ಬಂಗಾರಪ್ಪ ಅವರು ಬರೆದಿರುವ ಸುದೀರ್ಘ ಪೋಸ್ಟ್​ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ವೈರಲ್​ ಆಗಿದೆ.
ಬಂಗಾರಪ್ಪನವರನ್ನು ಕೇವಲ ಪ್ರಚಾರ ಸಾಮಗ್ರಿಯನ್ನಾಗಿ ಬಳಸಿಕೊಂಡ ಇವರಿಗೆ ತಕ್ಕ ಶಾಸ್ತಿಯಾಯಿತು. ಈ ಮಹಾಪರಾಧಕ್ಕಾಗಿ ಜಿಲ್ಲೆಯ, ಕ್ಷೇತ್ರದ ಜನರ ಕ್ಷಮಾಪಣೆ ಕೇಳಿ ಹೋಗಿಬರಲಿ, ಟಾಟಾ. ಮೇಲಾಗಿ,ಕನ್ನಡದ ಕಣ್ಮಣಿ ಡಾ. ರಾಜಕುಮಾರ್ ರವರ ಹೆಸರನ್ನು ದುರುಪಯೋಗ ಪಡಿಸಿಕೊಂಡಿದ್ದಲ್ಲದೆ ಅವರಿಗಿಲ್ಲದಿದ್ದ ಇಂಗಿತವನ್ನು ಇತ್ತೆoದು ಪ್ರಚುರಪಡಿಸಿ ಲಾಭ ಮಾಡಿಕೊಳ್ಳಬಯಸಿದ ಇವರಿಗೆ ಮಾಡಿದ್ದುಣ್ಣೋ ಮಹಾರಾಯ ಎಂಬಂತ ಸ್ಥಿತಿಯಾಗಿದೆ. ಉತ್ತಮ ಉದ್ದೇಶ ಇವರದ್ದಾಗಿದ್ದರೆ ಖಂಡಿತ ವಿಜಯಲಕ್ಷ್ಮಿ ಒಲಿಯುತ್ತಿದ್ದಳು, ಸ್ವಂತ ಸಹೋದರನ ಭವಿಷ್ಯಕ್ಕೆ ತೊಡರುಗಾಲು ಹಾಕಲೆಂದೇ ಬೆಂಗಳೂರಿನಿಂದ ಧಾವಿಸಿಬಂದು ತಿಳಿಯಾಗಿಸಬೇಕಿದ್ದ ವಾತಾವರಣವನ್ನು ಕಲುಷಿತಗೊಳಿಸಿ, ದಿಕ್ಕು ದೆಸೆ ಇಲ್ಲದಂತಾಗಿ ಹೋಗಿ ಗೂಡು ಸೇರಿಕೊಂಡಿದ್ದಾರೆ ಬೆಂಗಳೂರಿಗೆ, ಹಿಂತಿರುಗಿ ಬರುವುದು ಕನಸಿನ ಮಾತು.


ಇದನ್ನೂ ಓದಿ:ಡಿ.ಕೆ. ಸುರೇಶ್​ರನ್ನು ಸೋಲಿಸಿದ್ದು ಜನರು, ಬಿಜೆಪಿ-ಜೆಡಿಎಸ್​ ಮೈತ್ರಿ ಅಲ್ಲಾ: ಸಚಿವ ಜಮೀರ್​ ಅಹ್ಮದ್
ಕನ್ನಡಕ್ಕೆ, ಕನ್ನಡನಾಡಿಗೆ ಅವಮಾನಪಡಿಸಿದಾತ, ಟ್ರೋಲ್​ ಮಾಡಿದವರಿಗೆ, ಮಾಧ್ಯಮದವರಿಗೆ ಶಾಪ ಹಾಕಿ ತಾನೇ ಶಾಪಗ್ರಸ್ತನಾದ. ಅವನ ಭಾವ, ನನ್ನ ತಂಗಿಯ ಗಂಡ ಡಾ. ಶಿವರಾಜ್​ಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು. ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ, ಬೇರೆಯವರಿಗೆ ಅವಕಾಶ ಸಿಗಲಾರದು.
ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, ನಾಲ್ಕು ಗೋಡೆಗಳೊಳಗೆ, ತಮ್ಮ ಪಟಾಲಂ ಮುಂದೆ ಮಾತ್ರ ಚಾಲ್ತಿಯಲ್ಲಿರಬೇಕು. ದಿಕ್ಕು ಗೆಟ್ಟು ದಿಕ್ಕಾಪಾಲಾಗಿ ಹೋಗಿ ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವು ಹಿಂತಿರುಗಿ ಬರುವುದು ಕನಸಿನ ಮಾತು ಎಂದು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
