ಬೆಂಗಳೂರು:ನಾನು ನೀಲಿ ಚಿತ್ರಗಳನ್ನು ಪ್ರದರ್ಶನ ಮಾಡುತ್ತಿದ್ದೆ ಎಂದು ಆರೋಪ ಮಾಡಿರುವ ಕುಮಾರಣ್ಣ (ಎಚ್​ಡಿಕೆ) ಬುದ್ಧಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದ ಅವರು ನಾನು ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಟೂರಿಂಗ್ ಟಾಕೀಸ್‌ ಗಳನ್ನು ಇಟ್ಟಿದ್ದೇ. ಒಂದಲ್ಲ ಮೂರ್ನಾಲ್ಕು ಕಡೆ ಟೆಂಟ್‌ಗಳನ್ನು ಇಟ್ಟಿದ್ದೆ. ದೊಡ್ಡಆಲಹಳ್ಳಿ, ಹಾರೋಬೆಲೆ, ಕೋಡಿಹಳ್ಳಿಗಳಲ್ಲಿ ನಡೆಸುತ್ತಿದ್ದೆ. ಹುಣಸೇಹಳ್ಳಿಯಲ್ಲಿ ಈಗಲೂ ಟೆಂಟ್ ಇದೆ. ಈ ಊರುಗಳಿಗೆ ಹೋಗಿ ಮಾದ್ಯಮದವರೇ ಸಮೀಕ್ಷೆ ನಡೆಸಿ, ನಾನು ಯಾವ ಚಿತ್ರಗಳ ಪ್ರದರ್ಶನ ಮಾಡಿಸುತ್ತಿದ್ದೆ ಎಂದು ಜನರ ಬಳಿ ಕೇಳಿ. ಕುಮಾರಸ್ವಾಮಿ ಅವರಿಗೆ ನೀವೆ ಉತ್ತರಿಸಿ ಎಂದರು.ಕುಮಾರಸ್ವಾಮಿ ಪದೇ, ಪದ ನಿಮ್ಮ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಿರುವುದರ ಹಿಂದಿನ ಕಾರಣವೇನು ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ “ಅವರು ದೊಡ್ಡವರು, ಏನೇ ಹೇಳಿದರು ನಾವು ವೈಯಕ್ತಿಕವಾಗಿ ತೆಗೆದುಕೊಳ್ಳುವುದಿಲ್ಲ. ಅವರು ಬಳಸುತ್ತಾರೆ ಎಂದು ನಾನು ಏಕವಚನ ಬಳಸುವುದಿಲ್ಲ. ಅದು ಅವರ ಸಂಸ್ಕೃತಿ. ಅವರು ಕುಳಿತಿದ್ದ ಸ್ಥಾನ ದೊಡ್ಡದು, ಅದಕ್ಕೆ ಅವರಿಗೆ ಗೌರವ ಕೊಡುತ್ತೇನೆ” ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 7 =
Remember me
