ಬೆಂಗಳೂರು:ಮುಂಬರುವ ವಿಧಾನಸಭೆ ಚುನಾವಣೆಗೆ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ!
2023ಕ್ಕೆ ವಿಧಾಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಶತಾಯಗತಾಯ ಜೆಡಿಎಸ್​ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ಪಣ ತೊಟ್ಟಿದ್ದು, ಆ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ನಿರತರಾಗಿದ್ದಾರೆ. ಚುನಾವಣೆಗೆ ಇನ್ನೂ 2 ವರ್ಷ ಸಮಯ ಇದೆ. ಆಗಲೇ ಕೆಲ ಕ್ಷೇತ್ರಗಳಲ್ಲಿ ಜೆಡಿಎಸ್​ ಟಿಕೆಟ್​ ಆಕಾಂಕ್ಷಿತರ ನಡುವೆ ಪೈಪೋಟಿ ಏರ್ಪಟ್ಟಿದೆ.ಇದನ್ನೂ ಓದಿರಿವಾಟ್ಸ್​ಆ್ಯಪ್​ ವಿಡಿಯೋ ಕಾಲ್​ನಲ್ಲಿ ಬೆತ್ತಲಾದ ಯುವತಿಯರು… ಕಣ್ತುಂಬಿಕೊಂಡವನಿಗೆ ಕಾದಿತ್ತು ಭಾರಿ ಸಂಕಷ್ಟ!
ಈ ನಡುವೆ ಆನೇಕಲ್ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್​ ಅಭ್ಯರ್ಥಿಗಳ ಹೆಸರನ್ನು ಸತಃ ಕುಮಾರಸ್ವಾಮಿಯೇ ಭಾನುವಾರ ಘೋಷಿಸಿದ್ದಾರೆ.
ಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಆನೇಕಲ್​ ಮತ್ತು ಬೆಂ.ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಘೋಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಚ್​ಡಿಕೆ, ಆನೇಕಲ್​ನಿಂದ ಕೆ.ಪಿ.ರಾಜು ಹಾಗೂ ಬೆಂ.ದಕ್ಷಿಣ ಕ್ಷೇತ್ರದಿಂದ ಪ್ರಭಾಕರ್​ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದರು. ಮುಂಬರುವ ಚುನಾಣೆಗೆ ಈ ಎರಡೂ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್​ ಪ್ರಕಟಿಸಿದ್ದು, ಇಲ್ಲಿನದ್ದೇ ರಾಜ್ಯದಲ್ಲಿ ಮೊದಲು.
ಕಳೆದ ಬಾರಿ ಬಿಎಸ್ಪಿ ಜೊತೆ ಹೊಂದಾಣಿಕೆಯಿಂದ ನಮಗೆ ತೊಂದರೆ ಆಯಿತು. ಈ ಬಾರಿ ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಇಲ್ಲ. ಪಕ್ಷ ಸಂಘಟನೆಗಾಗಿ ಈಗಿನಿಂದಲೇ ಅಭ್ಯರ್ಥಿ ಘೋಷಣೆ ಮಾಡಿದ್ದೇನೆ. ಮುಂದಿನ ಬಾರಿ ನಾವು ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎಂದರು. ಇನ್ನು ಭ್ರಷ್ಟಾಚಾರದ ಆರೋಪ ಹೊತ್ತಿರುವ ರಿಯಲ್ ಎಸ್ಟೇಟ್ ಉದ್ಯಮಿ ಪ್ರಭಾಕರ್​ ರೆಡ್ಡಿಗೆ ಟಿಕೆಟ್ ಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.
ಎಫ್​ಡಿಎ ಪ್ರಶ್ನೆಪತ್ರಿಕೆ ಲೀಕ್: 14ಕ್ಕೇರಿದ ಬಂಧಿತರ ಸಂಖ್ಯೆ, 36 ಪುಟಗಳ ಪ್ರಶ್ನೆಪತ್ರಿಕೆ ಸೀಜ್

ಧಾರವಾಡದಲ್ಲಿ ಅಪಘಾತ: ಸಾವಲ್ಲೂ ಒಂದಾದ ಬಾಲ್ಯ ಸ್ನೇಹಿತೆಯರು, ಅವರ ಮಕ್ಕಳೇ ಹೊರತಂದ ಈ ವಿಡಿಯೋ ಮನಕಲಕುತ್ತೆ!

VIDE0| ಅಬ್ಬಬ್ಬಾ! ಈ​​ ಜೋಡಿ ಕಂಡವರ ಮನೆ ಮುಂದೆ ಕುಳಿತು ಹೀಗಾ ಮಾಡೋದು?

ಕಾಲೇಜು ಯುವತಿಯ ಬೆತ್ತಲೆ ಫೋಟೋ ಸ್ನೇಹಿತರ ಕೈಯಲ್ಲಿ! ಮುಂದೆ ನಡೆದೇ ಹೋಯ್ತು ಅವಾಂತರ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − seven =
Remember me
