ಬೆಂಗಳೂರು:ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.
ಪೆನ್‌ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು. ದುರಂತವೆಂದರೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ದೂರಿದರು.
ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.
ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಈ ವಿಷಯದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ನೋಡರೆ ದೇವೆಗೌಡರ ಕುಟುಂಬವನ್ನು ರಾಜಕೀಯವಾಗಿ ನಿರ್ನಾಮ ಮಾಡಬೇಕು ಎಂದು ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು.
ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಸಿಬಿಐ ಕೊಡಬೇಕು. ನಾವು ಕೂಡ ಏನು ಮಾಡಬೇಕು ಎಂಬ ಬಗ್ಗೆ ಕಾನೂನು ತಜ್ಞರ ಜತೆ ಚರ್ಚೆ ಮಾಡುತ್ತೇವೆ. ಈ ವಿಷಯದಲ್ಲಿ ಕಾನೂನು ಚೌಕಟ್ಟಿನಲ್ಲಿ ಸತ್ಯಾಂಶ ಹೊರಗೆ ತರಲು ಏನೇನು ಕ್ರಮ ತೆಗೆದುಕೊಳ್ಳಬೇಕೋ ಕೈಗೊಳ್ಳುತ್ತೇವೆ ಎಂದು ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಈ ಪ್ರಕರಣದ ಬಗ್ಗೆ ಸಿಎಂ ಅವರು ಲಘುವಾಗಿ ಮಾತನಾಡುವುದು ಬೇಡ. ಅವರು ನಮ್ಮ ಪ್ರಶ್ನೆಗಳಿಗೆ ಉತ್ತರ ಕೊಡದೇ ನುಣಿಚಿಕೊಳ್ಳುತ್ತಿದ್ದಾರೆ. ಈ ಪ್ರಕರಣವನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಯಾರಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿಲ್ಲ. ಇದು ಎಸ್‌ಐಟಿ ತಂಡ ಅಲ್ಲ. ಇದು ಎಸ್‌ಐಟಿ ದಂಡ! ಸುಖಾಸುಮ್ಮನೆ ದಂಡಕ್ಕೆ ಇದನ್ನು ರಚನೆ ಮಾಡಲಾಗಿದೆ. ಎಸ್‌ಐಟಿ ದಂಡವನ್ನು ತಮಗೆ ಆಗದವರ ಮೇಲೆ ಪ್ರಯೋಗ ಮಾಡಲು ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜ್ವಲ್ಗೆ ಈಗಾಗಲೇ ವಾಪಸ್ ಬರುವಂತೆ ಮನವಿ ಮಾಡಿದ್ದೇನೆ. ಎಲ್ಲೇ ಇದ್ದರೂ ಬಂದು ಎಸ್‌ಐಟಿ ಮುಂದೆ ಹಾಜರಾಗು ಎಂದು ಸಂದೇಶ ನೀಡಿದ್ದೇನೆ. ನನಗೆ ಪ್ರಜ್ವಲ್ ಸಂಪರ್ಕದಲ್ಲಿ ಇಲ್ಲ. ಆ ಕಾರಣಕ್ಕೆ ಸಾರ್ವಜನಿಕವಾಗಿ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ. ನಾನೂ ಕೂಡ ವಾಪಸ್ ಬರುತ್ತಾನೆ ಎಂದು ನಿರೀಕ್ಷೆ ಇಟ್ಟುಕೊಂಡಿದ್ದೇನೆ. ದೇವೇಗೌಡರು ಹಾಗೂ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಗೌರವ ಎನ್ನುವುದು ಇದ್ದರೆ ವಾಪಸ್ ಬಾ.. ಎಂದು ಹೇಳಿದ್ದೇನೆ. ಈ ಕೂಡಲೇ ವಾಪಸ್ ಬಾ.. ಎಂದು ಮತ್ತೆ ನಿಮ್ಮ (ಮಾಧ್ಯಮಗಳ) ಮೂಲಕ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
