ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಭಾನುವಾರ ನಡೆದ ಸಭೆಯಲ್ಲಿ ಮೈತ್ರಿ ಘೋಷಣೆ ಮಾಡಿದ್ದರು. ಸೀಟು ಹಂಚಿಕೆ ನಿರ್ಧಾರಗಳನ್ನು ಪುತ್ರ, ಮಾಜಿ ಸಿಎಂ ಕುಮಾರಸ್ವಾಮಿ ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿದ್ದರು.
ಈ ನಿಟ್ಟಿನಲ್ಲಿ ಪ್ರಯತ್ನಗಳೂ ಮುಂದುವರಿಯುತ್ತಿವೆ. ಬುಧವಾರ ಕುಮಾರಸ್ವಾಮಿ ನಿವಾಸಕ್ಕೆ ಬಿಜೆಪಿ ಪ್ರಮುಖ ಕೆಲವು ನಾಯಕರು ತೆರಳಲಿದ್ದಾರೆ. ಎಚ್​.ಡಿ. ಕುಮಾರಸ್ವಾಮಿ ಆರೋಗ್ಯ ವಿಚಾರಿಸುವ ನೆಪದಲ್ಲಿ ಬಿಜೆಪಿ ನಾಯಕರು ಭೇಟಿ ನೀಡುತ್ತಿದ್ದಾರೆ ಎನ್ನಲಾಗಿದೆ.ಆದರೆ ಈ ಬಗ್ಗೆ ಕುಮಾರಸ್ವಾಮಿ ಕಡೆಯವರು ಇನ್ನೂ ಖಚಿತಪಡಿಸಿಲ್ಲ.
ರಾಜ್ಯ ನಾಯಕರ ಭೇಟಿ ಮಾಡಬೇಕೋ ಅದಕ್ಕೂ ಮೊದಲು ಪ್ರಧಾನಿ ಭೇಟಿ ಮಾಡಬೇಕೋ ಎಂಬ ಸಂದಿಗ್ಧತೆಯಲ್ಲಿ ಕುಮಾರಸ್ವಾಮಿ ಇದ್ದಾರೆ‌. ಹಾಗಾಗಿ ಬ್ರೇಕ್ವಫಾಸ್ಟ್ ಮೀಟಿಂಗ್ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.
ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಕುಮಾರಸ್ವಾಮಿ ಉತ್ಸುಕರಾಗಿದ್ದು, ಸಮಯ ನಿಗದಿಯ ನಿರೀಕ್ಷೆಯಲ್ಲಿದ್ದಾರೆ.ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮತ್ತೊಮ್ಮೆ ಭೇಟಿ ಮಾಡುವ ಸಾಧ್ಯತೆಗಳಿವೆ. ಮೈತ್ರಿ ಘೋಷಣೆ ಬಳಿಕ ಭೇಟಿ ಇದಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seven − 5 =
Remember me
