ಬೆಂಗಳೂರು ಉಗ್ರ ಚಟುವಟಿಕೆಗಳ ಕೇಂದ್ರಸ್ಥಾನವಾಗುತ್ತಿದೆ. ಉಗ್ರಗಾಮಿ ಕೃತ್ಯಗಳ, ಸ್ಲೀಪರ್​ ಸೆಲ್ ಕೇಂದ್ರವಾಗಿ ಪರಿಣಮಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ನೀಡಿದ್ದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್​ಗಳ ಮೂಲಕ, ತೇಜಸ್ವಿ ಸೂರ್ಯ ಅವರ ಹೆಸರು ಉಲ್ಲೇಖಿಸದರೆ ಈ ಹೇಳಿಕೆಯನ್ನು ಖಂಡಿಸಿದ್ದಾರೆ. ಡಿಜೆ ಹಳ್ಳಿ ಗಲಭೆಯಲ್ಲಿ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲವರು ಸಿಕ್ಕಿಬಿದ್ದಿದ್ದರು. ಒಪ್ಪಿಕೊಳ್ಳೋಣ..ಆದರೆ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕೇ ಹೊರತು, ಬೆಂಗಳೂರಿನ ವಿರುದ್ಧ ಇರಬಾರದು ಎಂದು ಹೇಳಿದ್ದಾರೆ.ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಟೀಕೆ ಸರಿಯಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು ಎಂದು ಕುಮಾರಸ್ವಾಮಿಯವರು ಟ್ವೀಟ್​ನಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ:ಬಾಬ್ರಿ ಮಸೀದಿ ಧ್ವಂಸ ಪ್ರಕರಣ: ನಾಳೆ ಐತಿಹಾಸಿಕ ತೀರ್ಪು- ಎಲ್ಲೆಡೆ ಕಟ್ಟೆಚ್ಚರ
ಬೆಂಗಳೂರು ಉಗ್ರರ ಕೇಂದ್ರವಾಗುತ್ತಿದೆ ಎಂದು ಬಿಜೆಪಿಯೊಳಗಿನ ಕೆಲವು ಅಪ್ರಬುದ್ಧರು ಹೇಳಿಕೆ ನೀಡುವ ಮೂಲಕ ಬೆಂಗಳೂರಿಗೆ ಅಪಮಾನ ಮಾಡುತ್ತಿದ್ದಾರೆ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೆ ಸಿಎಂ ಬಿ.ಎಸ್​.ಯಡಿಯೂರಪ್ಪನವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮಗಳ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು ಎಂದು ಹೇಳಿದ್ದಾರೆ.ಬೆಂಗಳೂರು ಕೇವಲ ಬಿಬಿಎಂಪಿ ಚುನಾವಣೆ ಮಾತ್ರವಲ್ಲ, ಬೆಂಗಳೂರು 28 ವಿಧಾನಸಭೆ ಕ್ಷೇತ್ರ ಮಾತ್ರವಲ್ಲ, ಬೆಂಗಳೂರು ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧೃವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ:ಆರ್​ಸಿಬಿ ಗೆಲ್ಲುತ್ತಿದ್ದಂತೆ ವಿರಾಟ್​ ಕೊಹ್ಲಿ ಟೀಕಾಕಾರರ ಕಾಲೆಳೆದ ಪ್ರೀತಿ ಜಿಂಟಾ…!
ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತಿದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಭಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನಗಳೂ ಮೂಡುತ್ತಿವೆ. ಯಾಕೆಂದರೆ ಕೆಲ ಮಂದಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ಎಂದು ಕುಟುಕಿದ್ದಾರೆ.
ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರಣವಾಯ್ತಾ ಸಿಎಂ ಬಿಎಸ್​ವೈ ತಿರುಪತಿ ಭೇಟಿ..?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
